ಮಂಗಳೂರಲ್ಲಿ ಆರೆಸ್ಸೆಸ್ ಕಾರ್ಯಕರ್ತನ ಕೊಲೆ ಯತ್ನ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ನವೆಂಬರ್ 11: ತಲವಾರಿನಿಂದ ಕಡಿದು ಆರೆಸ್ಸೆಸ್ ಕಾರ್ಯಕರ್ತನ ಕೊಲೆಗೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಕುತ್ತಾರ್ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಕುತ್ತಾರಿನ ನಿವಾಸಿ ರಾಮ್‌ಮೋಹನ್ (38) ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ.

ಮಜಲುತೋಟದ ಸ್ಮಶಾನದ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದ ರಾಮ್ ಮೋಹನ್‌ ರ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ತಲವಾರು ಬೀಸಿ ಹಲ್ಲೆ ನಡೆಸಿದ್ದಾರೆ. ಪರಿಣಾಮವಾಗಿ ರಾಮ್‌ಮೋಹನ್‌ರ ಕುತ್ತಿಗೆ ಹಾಗೂ ತಲೆಯ ಭಾಗಗಳಿಗೆ ಗಾಯವಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.[ಟಿಪ್ಪು ವಿರೋಧಿಸಿ ರಾತ್ರಿಯೇ ಬಲಿಯಾದ ಬಿಜೆಪಿ ಕಾರ್ಯಕರ್ತ]

mangaluru

ಸಚಿವ ಯು.ಟಿ.ಖಾದರ್‌ ಖಂಡನೆ: ಇನ್ನು ಘಟನೆಯನ್ನು ಖಂಡಿಸಿ ಸಚಿವ ಯು.ಟಿ.ಖಾದರ್‌ ಬೆಂಗಳೂರಿನಿಂದ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಅಲ್ಲದೆ ಮಂಗಳೂರು ಪೊಲೀಸ್‌ ಆಯುಕ್ತರೊಂದಿಗೆ ಮಾತನಾಡಿ, ದುಷ್ಕರ್ಮಿಗಳನ್ನು ಪತ್ತೆ ಹಚ್ಚುವಂತೆ ಸೂಚನೆಯನ್ನು ನೀಡಿದ್ದಾರೆ.[ಬೀದರಿನಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಬಲಿ]

ಇತ್ತೀಚೆಗೆ ಹಿಂದೂಪರ ಸಂಘಟನೆಗಳ ಸದಸ್ಯರ ಮೇಲೆ ಹಲ್ಲೆ ಹಾಗೂ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆಯಾಗಿತ್ತು. ಆ ನಂತರ ಪಿರಿಯಾಪಟ್ಟಣದ ಮಾಗಳಿ ರವಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಬೀದರ್ ಹಾಗೂ ಬೆಂಗಳೂರಿನಲ್ಲೂ ಬಿಜೆಪಿ ಕಾರ್ಯಕರ್ತರ ಕೊಲೆಯಾಗಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Murder attempt on RSS worker Ramamohan on Thursday night in Mangaluru.
Please Wait while comments are loading...