ಪುತ್ತೂರು ಮಹಾಲಿಂಗೇಶ್ವರ ದೇಗುಲಕ್ಕೆ ಮುತ್ತಪ್ಪ ರೈ ದಂಪತಿ ಭೇಟಿ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಡಿಸೆಂಬರ್ 24: ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಪ್ರವೇಶಿಸಿದ ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ, ಉದ್ಯಮಿ ಎನ್. ಮುತ್ತಪ್ಪ ರೈ ದಂಪತಿ, ಪುತ್ತೂರು ಶ್ರಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು.

ಬೆಂಗಳೂರಿನ ಬಿಡದಿಯಲ್ಲಿರುವ ತನ್ನ ನಿವಾಸದಲ್ಲಿ ಪ್ರತಿನಿತ್ಯ ಆರಾಧಿಸಿಕೊಂಡು ಬಂದಿರುವ ತನ್ನ ಕುಲದೇವರಾದ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಡಿಸೆಂಬರ್ 19ರಂದು ಸರಳ ವಿವಾಹವಾದ ಮುತ್ತಪ್ಪ ರೈ ಮತ್ತು ಅನುರಾಧ ಅವರು ಶುಕ್ರವಾರ ಪುತ್ತೂರಿನ ದೇವಳಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. [ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಮದುವೆ]

Muthappa Rai

ಈ ಸಂದರ್ಭದಲ್ಲಿ ಮುತ್ತಪ್ಪ ರೈ ಅವರ ಸಹೋದರ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಕರುಣಾಕರ ರೈ, ಅವರ ಪತ್ನಿ ಕೃಷ್ಣವೇಣಿ ಕರುಣಾಕರ ರೈ, ಪುತ್ರ ಅಶ್ವಿನ್ ಕುಮಾರ್ ರೈ, ಆಪ್ತರಾದ ಪ್ರವೀಣ್ ಚಂದ್ರ ಶೆಟ್ಟಿ ಬೇಕೂರು, ಜಯಕರ್ನಾಟಕ ಸಂಘಟನೆಯ ಕಾರ್ಯಾಧ್ಯಕ್ಷ ಪ್ರಸನ್ನ ಕುಮಾರ್ ಶೆಟ್ಟ, ಅಧ್ಯಕ್ಷ ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Muthappa Rai couple visited Puttur Shree Mahalingeshwara Temple and offered special prayers.Businessman, Jaya Karnataka organisation founder, philanthropist Nettala Muthappa Rai recently married Anuradha.
Please Wait while comments are loading...