ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೇ 19ರ ದಕ್ಷಿಣ ಕನ್ನಡ ಬಂದ್‌ಗೆ ಸಂಸದರ ಬೆಂಬಲ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಮೇ 16 : ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟಕ್ಕೆ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಬೆಂಬಲ ನೀಡಿದ್ದಾರೆ. 'ಮೇ 19ರ ಗುರುವಾರ ನಡೆಯಲಿರುವ ಸ್ವಯಂ ಘೋಷಿತ ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಸಂಪೂರ್ಣ ಬೆಂಬಲ ನೀಡುವುದಾಗಿ' ಅವರು ತಿಳಿಸಿದ್ದಾರೆ.

ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ವತಿಯಿಂದ ಮೇ 16 ರಂದು ಬೃಹತ್ ಪ್ರತಿಭಟನೆ ಮತ್ತು ಮೇ 19 ರಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಕರೆ ನೀಡಲಾಗಿದೆ. ಈ ಹೋರಾಟಗಳಿಗೆ ಸಂಸದರು ತಮ್ಮ ಬೆಂಬಲ ನೀಡಿದ್ದಾರೆ. [ಎತ್ತಿನಹೊಳೆಗೆ ವಿರೋಧ, ಮೇ 19ರಂದು ದಕ್ಷಿಣ ಕನ್ನಡ ಬಂದ್]

nalin kumar kateel

'ಎತ್ತಿನಹೊಳೆ ಯೋಜನೆಯಿಂದ ಬರ ಪೀಡಿತ ಜಿಲ್ಲೆಗಳಿಗೆ ನೀರು ಸಿಗಲು ಸಾಧ್ಯವಿಲ್ಲ ಎಂದು ಈಗಾಗಲೇ ತಜ್ಞರು ವರದಿ ನೀಡಿದ್ದಾರೆ. ಇದು ಕೇವಲ ಹಣ ಮಾಡುವ ಯೋಜನೆ ಎಂದು ಕಾಂಗ್ರೆಸ್ ಪಕ್ಷದ ನಾಯಕರೇ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ' ಎಂದು ಕಟೀಲ್ ಹೇಳಿದ್ದಾರೆ. [ಎತ್ತಿನಹೊಳೆ ಯೋಜನೆ ಬಗ್ಗೆ ಆತಂಕ ಬೇಡ : ಸಿದ್ದರಾಮಯ್ಯ]

'ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಲೇ ನೀರಿನ ಸಮಸ್ಯೆ ಎದುರಾಗಿದೆ. ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿಯ ಹೋರಾಟವನ್ನು ಬೆಂಬಲಿಸುವ ಮೂಲಕ ಜಿಲ್ಲೆಯ ಜನತೆ ರಾಜ್ಯ ಸರ್ಕಾರಕ್ಕೆ ಸೂಕ್ತ ಎಚ್ಚರಿಕೆ ನೀಡಬೇಕೆಂದು' ಸಂಸದರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ['ಎತ್ತು' ಏರಿಗೆ 'ಹೊಳೆ' ನೀರಿಗೆ ಇದೇ ಎತ್ತಿನಹೊಳೆ ಯೋಜನೆ]

ಬಂದ್ ಕರೆ : ಎತ್ತಿನಹೊಳೆ ಯೋಜನೆಯನ್ನು ಸ್ಥಗಿತಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಮೇ 19ರಂದು ದಕ್ಷಿಣ ಕನ್ನಡ ಬಂದ್‌ಗೆ ಕರೆ ನೀಡಲಾಗಿದೆ.

English summary
Netravati Samrakshana Samiti called for Dakshina Kannada bandh on May 19, 2016 to protest against Yettinahole drinking water project. Dakshina Kannada MP (BJP) Nalin Kumar Kateel extended support for Bandh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X