ದೀಪಕ್ ಹತ್ಯೆ ತನಿಖೆಗೆ ಎನ್ಐಎ ವಹಿಸುವಂತೆ ನಳಿನ್ ಒತ್ತಾಯ

Subscribe to Oneindia Kannada

ನವದೆಹಲಿ, ಜನವರಿ 3: ಇಂದು ಮಂಗಳೂರಿನ ಕಾಟಿಪಳ್ಳದಲ್ಲಿ ಕೊಲೆಯಾದ ದೀಪಕ್ ಹತ್ಯೆ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

ಮಂಗಳೂರಲ್ಲಿ ದೀಪಕ್ ಹತ್ಯೆ: ಚಿತ್ರಗಳಲ್ಲಿ ಪ್ರಕ್ಷುಬ್ಧ ಕರಾವಳಿ

ನವದೆಹಲಿಯಲ್ಲಿ ಮಾತನಾಡಿರುವ ಅವರು, "ದೀಪಕ್ ಕೊಲೆಯ ಹಿಂದೆ ಉಗ್ರರನ್ನು ಬೆಂಬಲಿಸುವವರ ಕೈವಾಡವಿದೆ. ನಮಗೆ ರಾಜ್ಯ ಸರಕಾರದ ತನಿಖೆ ಮೇಲೆ ನಂಬಿಕೆಯಿಲ್ಲ. ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು," ಎಂದು ಬೇಡಿಕೆಯಿಟ್ಟಿದ್ದಾರೆ.

ಮಂಗಳೂರು: ಯುವಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಹಿಂದೂ ಕಾರ್ಯಕರ್ತರ ಕೊಲೆಗೆ ರಾಜ್ಯ ಸರಕಾರ ಸ್ಪಂದಿಸುತ್ತಿಲ್ಲ ಎಂದು ದೂರಿರುವ ಅವರು, "ದೀಪಕ್ ರಾವ್ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು," ಎಂದು ಒತ್ತಾಯಿಸಿದ್ದಾರೆ.

Nalin Kumar Kateel urges NIA investigation in Deepak's murder

ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಇಂದು ಮಧ್ಯಾಹ್ನ ಸುಮಾರು 1.30ಕ್ಕೆ ಕೃಷ್ಣಾಪುರದ ಗಣೇಶ್ ಪುರ ನಿವಾಸಿ ದೀಪಕ್ ರಾವ್ (32) ಕೊಲೆ ಮಾಡಲಾಗಿದೆ.

ಡೊಕೊಮೊ ಮೊಬೈಲ್ ಕಂಪನಿಯಲ್ಲಿ ಕರೆನ್ಸಿ ಡಿಸ್ಟ್ರಿಬ್ಯೂಟರ್ ಆಗಿದ್ದ ದೀಪಕ್ ಸ್ಥಳೀಯ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ. ಕಾಟಿಪಳ್ಳದಲ್ಲಿ ಬೈಕಿನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ಕಾರಿನಲ್ಲಿ ಬಂದ ನಾಲ್ವರ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಸ್ಥಳೀಯ ಮುಸ್ಲಿಮರು ಕಲ್ಲೆಸೆದು ದುಷ್ಕರ್ಮಿಗಳನ್ನು ಓಡಿಸಿದ್ದಾರೆ.

Nalin Kumar Kateel urges NIA investigation in Deepak's murder

ಅಷ್ಟರಲ್ಲಿ ತೀವ್ರ ಗಾಯಗೊಂಡ ದೀಪಕ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸುರತ್ಕಲ್ ಮತ್ತು ಮಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದ್ದಾರೆ.
ಮಜೀದ್ ಎಂಬವರ ಮೊಬೈಲ್ ಶಾಪ್ ನಲ್ಲಿ ದೀಪಕ್ ಕೆಲಸಕ್ಕಿದ್ದರು ಎಂದು ಹೇಳಲಾಗಿದೆ.

ಕಲೆಕ್ಷನ್ ಹಣವನ್ನು ಅಂಗಡಿಗೆ ಕೊಟ್ಟು ಮನೆಗೆ ವಾಪಾಸಾಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬೈಕನ್ನು ಅಡ್ಡಗಟ್ಟಿ ಕಾಟಿಪಳ್ಳದ ಮೂಡಾಯಿಕೋಡಿ ಎಂಬಲ್ಲಿ ಹತ್ಯೆ ಮಾಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Dakshina Kannada MP Nalin Kumar Kateel has demanded NIA probe in Deepak's murder case. Deepak was murdered in Katipalla, Mangaluru, today afternoon.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ