ನಟ ನಾನಾ ಪಾಟೇಕರ್, ಜಸ್ಟಿಸ್ ಕೆ.ಟಿ.ಶಂಕರನ್‌ಗೆ ‘ಧರ್ಮಶ್ರೀ’ ಪ್ರಶಸ್ತಿ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಜನವರಿ 25 : ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ ಹಾಗೂ ಜಸ್ಟಿಸ್ ಕೆ.ಟಿ.ಶಂಕರನ್ ರನ್ನು ಧರ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪುತ್ತೂರು ತಾಲೂಕಿನ ಈಶ್ವರಮಂಗಲದ ಹನುಮಗಿರಿ ಧರ್ಮಶ್ರೀ ಪ್ರತಿಷ್ಠಾನದ ವತಿಯಿಂದ ನೀಡಲಾಗುವ 2016ನೇ ಸಾಲಿನ 'ಧರ್ಮಶ್ರೀ' ಪ್ರಶಸ್ತಿಯನ್ನು ಈ ಬಾರಿ ಖ್ಯಾತ ನಟ ನಾನಾ ಪಾಟೇಕರ್ ಹಾಗೂ 2017ನೇ ಸಾಲಿನ ಧರ್ಮಶ್ರೀ ಪ್ರಶಸ್ತಿಯನ್ನು ಜಸ್ಟಿಸ್ ಕೆ.ಟಿ.ಶಂಕರನ್ ಅವರಿಗೆ ನೀಡಲಾಗುತ್ತಿದೆ.

Nana Patekar and KT Shankaran named for Dharmashree award

ಪ್ರಶಸ್ತಿ ಪ್ರದಾನ ಸಮಾರಂಭ ಬರುವ ಫೆಬ್ರವರಿ 11 ಮತ್ತು 12ರಂದು ಹನುಮಗಿರಿ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ನಡೆಯಲಿದೆ ಎಂದು ಧರ್ಮಶ್ರೀ ಪ್ರತಿಷ್ಠಾನದ ಅಧ್ಯಕ್ಷ ನನ್ಯ ಅಚ್ಚುತ ಮೂಡಿತ್ತಾಯ ತಿಳಿಸಿದ್ದಾರೆ. ಬುಧವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ' ರಾಮೋತ್ಸವದ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಫೆ.11ರಂದು ಸಂಜೆ ನಾನಾ ಪಾಟೇಕರ್ ಅವರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಎಡನೀರು ಮಠದ ಕೇಶವಾನಂದ ಭಾರತೀ ಸ್ವಾಮೀಜಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. [ಪ್ರತಿಷ್ಠಿತ ಪದ್ಮ ಪ್ರಶಸ್ತಿ ಪಡೆದ ಕ್ರೀಡಾಳುಗಳಿವರು]

Nana Patekar and KT Shankaran named for Dharmashree award

ಫೆ.12ರಂದು ಸಂಜೆ ಜಸ್ಟಿಸ್ ಕೆ.ಟಿ.ಶಂಕರನ್ ಅವರಿಗೆ ಧರ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮೈಸೂರು ಸಂಸ್ಥಾನದ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಮಹಾರಾಣಿ ತ್ರಿಶಿಕಾ ಕುಮಾರಿ ಒಡೆಯರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮೈಸೂರು ಸಂಸ್ಥಾನದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ನನ್ಯ ಻ಅಚ್ಚುತ ಮೂಡಿತ್ತಾಯ ತಿಳಿಸಿದ್ದಾರೆ. [ಸುಕ್ರಿ ಬೊಮ್ಮಗೌಡ ಸೇರಿದಂತೆ 89 ಸಾಧಕರಿಗೆ ಪದ್ಮ ಪ್ರಶಸ್ತಿ]

ಈ ಹಿಂದೆ ಧರ್ಮಶ್ರೀ ಪ್ರತಿಷ್ಠಾನದ ವತಿಯಿಂದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ, ರಾಮ ಜೋಯಿಸ್, ಎಸ್.ಎಲ್.ಭೈರಪ್ಪ, ಅಶೋಕ್ ಸಿಂಘಾಲ್, ಕೆ.ಜೆ.ಜೇಸುದಾಸ್, ಡಾ.ಬಿ.ವಿ.ಆಚಾರ್ಯ ಅವರಿಗೆ ಧರ್ಮಶ್ರೀ ಪ್ರಶಸ್ತಿ ನೀಡಲಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Famous film actor Nana Patekar & justice K. T Shankaran selected for Dharmashree award, 2016 ಻and 2017.
Please Wait while comments are loading...