ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿ. 18ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

|
Google Oneindia Kannada News

ಮಂಗಳೂರು, ಡಿಸೆಂಬರ್ 17: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಡಿ. 18 ರಂದು ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಆನ್ ಲೈನ್ ಸಮೀಕ್ಷೆ: ನರೇಂದ್ರ ಮೋದಿ ಏಕಮೇವಾದ್ವಿತೀಯಆನ್ ಲೈನ್ ಸಮೀಕ್ಷೆ: ನರೇಂದ್ರ ಮೋದಿ ಏಕಮೇವಾದ್ವಿತೀಯ

ಮಂಗಳೂರು ನಿಲ್ದಾಣದಿಂದ ‌ ವಾಯು ಪಡೆಯ ಹೆಲಿಕಾಪ್ಟರ್ ಮೂಲಕ ಲಕ್ಷದ್ವೀಪಕ್ಕೆ ಪ್ರಧಾನಿ ಪಯಣಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Narendra Modi to visit Mangaluru on December 18

ಪ್ರಧಾನಿ ಅವರ ಪ್ರವಾಸ ಕಾರ್ಯಕ್ರಮ ಇನ್ನೂ ಅಧಿಕೃತವಾಗಿ ನಿಗದಿಯಾಗಿಲ್ಲ. ಮೂಲಗಳ ಪ್ರಕಾರ ಪ್ರಧಾನಿ ಅವರು ಡಿ. 17 ರಂದು ರಾತ್ರಿಯೇ ಮಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸುವ ನಿರೀಕ್ಷೆ ಇದೆ.

ಗುಜರಾತಿನಲ್ಲಿ ಸ್ವತಃ ನೀತಿ ಸಂಹಿತೆ ಉಲ್ಲಂಘಿಸಿದರೇ ಪ್ರಧಾನಿ ಮೋದಿ?!ಗುಜರಾತಿನಲ್ಲಿ ಸ್ವತಃ ನೀತಿ ಸಂಹಿತೆ ಉಲ್ಲಂಘಿಸಿದರೇ ಪ್ರಧಾನಿ ಮೋದಿ?!

ನಗರದ ಖಾಸಗಿ ಹೋಟೆಲ್ ಅಥವಾ ಸರ್ಕಿಟ್ ಹೌಸ್ ನಲ್ಲಿ ಅವರು ವಾಸ್ತವ್ಯ ಹೂಡಲಿದ್ದಾರೆ. ಡಿ. 18 ರಂದು ಬೆಳಗ್ಗೆ ಲಕ್ಷದ್ವೀಪಕ್ಕೆ ತೆರಳಲಿದ್ದಾರೆ ಎನ್ನುವ ಮಾಹಿತಿ ಇದೆ. ಒಂದೊಮ್ಮೆ ಡಿ. 17ರ ಪ್ರವಾಸ ರದ್ದುಗೊಂಡರೆ ಡಿ. 18 ರಂದು ಬೆಳಗ್ಗೆ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಪ್ರಧಾನಿ ಅವರ ಪ್ರವಾಸದ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಮಾಹಿತಿ ಬಂದಿದ್ದು, ಕ್ಷೇತ್ರದಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಪ್ರಧಾನಿ ಒಖಿ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಹಾನಿಗೊಳಗಾದ ಲಕ್ಷದ್ವೀಪದ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ.

English summary
Narendra Modi to visit Mangauru on December 18 . PM Modi will arrive in Mangaluru International Airport by Air India One. Then he is going to visit Lakshadeep by Airforce special chopper.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X