ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಜಿರೆಯಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿ

ಉಜಿರೆಯ ಎಸ್‍ಡಿಎಂ ಪದವಿಪೂರ್ವ ಮಹಾವಿದ್ಯಾಲಯ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ನ.18 ಮತ್ತು 19ರಂದು ರಾಜ್ಯಮಟ್ಟದ,ಡಿ. 17ರಿಂದ 20ರವರೆಗೆ ರಾಷ್ಟ್ರಮಟ್ಟದ ಪಂದ್ಯಾವಳಿಗಳು ನಡೆಯಲಿವೆ.

By Ramesh
|
Google Oneindia Kannada News

ಮಂಗಳೂರು, ನವೆಂಬರ್. 06: ಉಜಿರೆಯ ಎಸ್‍ಡಿಎಂ ಪದವಿಪೂರ್ವ ಮಹಾವಿದ್ಯಾಲಯ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ನವೆಂಬರ್ 18 ಮತ್ತು 19ರಂದು ರಾಜ್ಯಮಟ್ಟದ ಪದವಿಪೂರ್ವ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾವಳಿ ಜರುಗಲಿದೆ. ಇನ್ನು ಡಿಸೆಂಬರ್ 17ರಿಂದ 20ರವರೆಗೆ ರಾಷ್ಟ್ರಮಟ್ಟದ ಪಂದ್ಯಾವಳಿಗಳು ನಡೆಯಲಿವೆ.

ಉಜಿರೆಯ ಎಸ್‍ಡಿಎಂ ಸಂಸ್ಥೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣವು ಮೊಟ್ಟಮೊದಲ ಬಾರಿಗೆ ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ರಾಜ್ಯ-ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಗಳಿಗೆ ಸಾಕ್ಷಿಯಾಗಲಿದೆ. ರಾಜ್ಯದ 30 ಜಿಲ್ಲೆಗಳಿಂದ ತಲಾ ಎರಡರಂತೆ ಒಟ್ಟು 60 ತಂಡಗಳ ಕ್ರೀಡಾಪಟುಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. [ಎಸ್ ಡಿಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳು 5ನೇ ಬಾರಿ ಚಾಂಪಿಯನ್ಸ್]

National and State Level Volleyball tournament in SDM College Ujire

ರಾಜ್ಯಮಟ್ಟದ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯ ನಂತರ ಇದೇ ಕ್ರೀಡಾಂಗಣದಲ್ಲಿ ಡಿಸೆಂಬರ್ 17ರಿಂದ 20ರವರೆಗೆ ರಾಷ್ಟ್ರಮಟ್ಟದ ಪಂದ್ಯಾವಳಿ ನಡೆಯಲಿದೆ. ರಾಜ್ಯಮಟ್ಟದಲ್ಲಿ ವಿಜೇತವಾದ ತಂಡಗಳು ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ.

ಕಳೆದ ವರ್ಷ ನಡೆದಿದ್ದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಎಸ್‍ಡಿಎಂ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಮೊದಲ ಬಹುಮಾನದ ಪ್ರಾಶಸ್ತ್ಯದೊಂದಿಗೆ ವಿಜೇತವಾಗಿತ್ತು.

English summary
Department of Pre-University Education and SDM college held National and State Level Volleyball tournament in SDM College Ujire on November 18 to 19 state level, and Decmeber 17 to 20 National Level.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X