ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿಪಾಹ್ ವೈರಸ್ ಭೀತಿ ಹಿನ್ನೆಲೆ, ಕರಾವಳಿಯಲ್ಲಿ ಭಾರೀ ಕಟ್ಟೆಚ್ಚರ

|
Google Oneindia Kannada News

ಮಂಗಳೂರು, ಮೇ 23: ಕೇರಳದಲ್ಲಿ 10ಕ್ಕೂ ಹೆಚ್ಚು ಜನರನ್ನು ಬಲಿ ಪಡೆದುಕೊಂಡಿರುವ ನಿಪಾಹ್ ವೈರಸ್ ಆತಂಕ ಕರಾವಳಿ ಜಿಲ್ಲೆಗಳನ್ನೂ ಆವರಿಸಿದೆ. ಪಕ್ಕದ ಕೇರಳದಿಂದ ನಿಪಾಹ್ ವೈರಸ್ ಸೋಂಕು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಹರಡದಂತೆ ಕಟ್ಟೆಚ್ಚರ ವಹಿಸಲಾಗಿದೆ.

ಈ ನಡುವೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೇರಳ ಮೂಲದ ಇಬ್ಬರು ರೋಗಿಗಳಿಗೆ ನಿಪಾಹ್ ವೈರಸ್ ಸೋಂಕು ತಗಲಿರುವ ಶಂಕೆಯ ಮೇರೆಗೆ ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

ನಿಪಾಹ್ ವೈರಸ್ ಪತ್ತೆ ಹಚ್ಚಿದ್ದು ಉಡುಪಿಯ ಮಣಿಪಾಲದ ವೈದ್ಯರುನಿಪಾಹ್ ವೈರಸ್ ಪತ್ತೆ ಹಚ್ಚಿದ್ದು ಉಡುಪಿಯ ಮಣಿಪಾಲದ ವೈದ್ಯರು

ನಿಪಾಹ್ ಸೋಂಕು ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಈಗಾಗಲೇ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಎಲ್ಲಾ ವೈದ್ಯರು, ಆಶಾ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕರ ಪತ್ರಗಳ ಮೂಲಕ ಮಾಹಿತಿ ನೀಡಲಾಗುತ್ತಿದೆ. ಕೇರಳದಿಂದ ಬಂದವರಲ್ಲಿ ಅಥವಾ ಇತರರಲ್ಲಿ ಸೋಂಕಿನ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ.

Nipah virus threat, alert in coastal districts

ಕೇರಳ ಗಡಿ ಭಾಗ ಮಂಗಳೂರಿನಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದ್ದು ನಿಪಾಹ್ ವೈರಸ್ ಶಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ವೆನ್ಲಾಕ್ ಆಸ್ಪತ್ರೆಯ ತಳ ಅಂತಸ್ತಿನಲ್ಲಿ ಸದ್ಯ 5 ಬೆಡ್ ಗಳ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ.

ಮಂಗಳೂರಿಗರು ಕೇರಳದ ಹಲವು ಭಾಗದೊಂದಿಗೆ ಸಾಂಸ್ಕೃತಿಕ , ವ್ಯವಹಾರಿಕ ಹಾಗೂ ಭಾವನಾತ್ಮಕ ಸಂಬಂಧ ಹೊಂದಿರುವ ಹಿನ್ನೆಲೆಯಲ್ಲಿ ನಿಪಾಹ್ ವೈರಸ್ ಹರಡಿರುವ ಕೇರಳದ ಪ್ರದೇಶಗಳಿಗೆ ಪ್ರಯಾಣ ಬೆಳೆಸದಂತೆ ಜನರಿಗೆ ಮಾಹಿತಿ ರವಾನಿಸಲಾಗಿದೆ.

ಮಾರಣಾಂತಿಕ ನಿಪಾಹ್ ವೈರಸ್ ಹೇಗೆ ಹರಡುತ್ತೆ ? ಮುನ್ನೆಚ್ಚರಿಕೆ ಏನು?ಮಾರಣಾಂತಿಕ ನಿಪಾಹ್ ವೈರಸ್ ಹೇಗೆ ಹರಡುತ್ತೆ ? ಮುನ್ನೆಚ್ಚರಿಕೆ ಏನು?

ಮರದಿಂದ ಬಿದ್ದ ಹಣ್ಣು ಹಂಪಲುಗಳನ್ನು ಹಾಗು ರೋಗ ಕಂಡು ಬಂದ ಮತ್ತು ಶಂಕಿತ ಪ್ರದೇಶದ ತಾಳೆ ಮತ್ತು ತೆಂಗಿನ ಮರಗಳ ಸೇಂದಿ ಸೇವಿಸದಂತೆ ಸೂಚನೆ ನೀಡಲಾಗಿದೆ.

ಉಡುಪಿ ಜಿಲ್ಲೆಯಲ್ಲೂ ನಿಪಾಹ್ ವೈರಸ್ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲಿ ಬರುವ ಸಂಶಯಾಸ್ಪದ ನಿಪಾಹ್ ವೈರಸ್ ರೋಗಿಗಳ ವಿವರಗಳನ್ನು ಕೂಡಲೇ ಆರೋಗ್ಯ ಇಲಾಖೆಗೆ ನೀಡುವಂತೆ ಸೂಚನೆ ರವಾನಿಸಲಾಗಿದೆ.

English summary
Hospitals of Mangaluru and Udupi get large numbers of patients from Kerala. Because of this the department of health and welfare is quite alert and messages have been sent to all government and private hospitals about Nipah virus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X