ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಬಗ್ಗೆ ಅವಹೇಳನಕಾರಿ ಪೋಸ್ಟ್

|
Google Oneindia Kannada News

ಉಡುಪಿ, ನವೆಂಬರ್ 17 : ಕುಂದಾಪುರ ಕ್ಷೇತ್ರ ಬಿಜೆಪಿಯ ಎರಡು ಬಣಗಳ ಕಿತ್ತಾಟ ಮತ್ತೆ ಮುಂದುವರೆದಿದೆ. ಸಾಮಾಜಿಕ ಜಾಲತಾಣ ದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರ ಕುರಿತು ಅವಹೇಳನಕಾರಿ ಚಿತ್ರಗಳನ್ನು ಹರಿಬಿಡಲಾಗಿದೆ. ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಬಿಜೆಪಿ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಕೆಪಿಎಂಇ ಕಾಯ್ದೆ ರದ್ದುಬಿಜೆಪಿ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಕೆಪಿಎಂಇ ಕಾಯ್ದೆ ರದ್ದು

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರ ಅವಹೇಳನಕಾರಿ ಚಿತ್ರಗಳನ್ನು ಮೂಲ ಬಿಜೆಪಿ ಬಣದಲ್ಲಿ ಗುರುತಿಸಿಕೊಂಡವವರು ಸಾಮಾಜಿಕ ಜಾಕತಾಣಗಳಲ್ಲಿ ಹರಿಬಿಟ್ಟು ಅವಮಾನ ಮಾಡಿರುವುದಾಗಿ ಉಡುಪಿಯ ಸೈಬರ್ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದೆ.

Obscene picture posts against Yeddyurappa, Shobha karandlaje

ಕುಂದಾಪುರ ಪುರಸಭೆ ಉಪಾಧ್ಯಕ್ಷ ರಾಜೇಶ್ ಕಾವೇರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ.ಕಿಶೋರ್ ಕುಮಾರ್ , ಮುಖಂಡ ರಾಜು ಪೂಜಾರಿ ಹಾಗೂ ಇತರರ ವಿರುದ್ಧ ದೂರು ದಾಖಲಾಗಿದೆ. ಇವರೆಲ್ಲರೂ ಮೂಲ ಬಿಜೆಪಿಗರಾಗಿದ್ದು ಕುಂದಾಪುರ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಸೇರ್ಪಡೆಯನ್ನು ವಿರೋಧಿಸುತ್ತಿದ್ದಾರೆ.

ಪರಿವರ್ತನಾ ಯಾತ್ರೆಯಲ್ಲಿ ಅಭ್ಯರ್ಥಿಗಳನ್ನು ಘೋಷಿಸುತ್ತಿಲ್ಲ : ಬಿಎಸ್‌ವೈಪರಿವರ್ತನಾ ಯಾತ್ರೆಯಲ್ಲಿ ಅಭ್ಯರ್ಥಿಗಳನ್ನು ಘೋಷಿಸುತ್ತಿಲ್ಲ : ಬಿಎಸ್‌ವೈ

ಇದೇ ನವೆಂಬರ್ 13 ರಂದು ಕುಂದಾಪುರದಲ್ಲಿ ನಡೆದ ಪರಿವರ್ತನಾ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮುಂಭಾಗದಲ್ಲಿಯೇ ಹಾಲಾಡಿ ಬಣ ಹಾಗೂ ಮೂಲ ಬಿಜೆಪಿ ಬಣ ಕಿತ್ತಾಡಿಕೊಂಡಿತ್ತು. ಈ ವೇಳೆ ಸಮಾವೇಶದ ವೇದಿಕೆಯಲ್ಲಿಯೇ ಬಿಎಸ್ ವೈ ಮೂಲ ಬಿಜೆಪಿಗರ ವಿರುದ್ಧ ಕಿಡಿಕಾರಿದ್ದರು.

ಇದರಿಂದ ಅಸಮಾಧಾನಗೊಂಡ ಬಿಜೆಪಿ ಮೂಲ ಬಣದವರು ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಆರೋಪಿಸಲಾಗಿದೆ. ಕುಂದಾಪುರ ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಸೈಬರ್ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದಾರೆ.

English summary
complaint was filed against three admins of 'BJP Kundapura' WhatsApp group for alleged posting of obscene picture involving BJP state president, B S Yeddyurappa, and Udupi-Chikkamgaluru MP, Shobha Karandlaje and also an objectionable post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X