ಶರತ್ ಮಡಿವಾಳ ಹತ್ಯೆ ಪ್ರಕರಣ, ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

Posted By:
Subscribe to Oneindia Kannada

ಮಂಗಳೂರು, ಆಗಸ್ಟ್ 23: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ನಲ್ಲಿ ನಡೆದ ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಜಬ್ಬಾರ್ ಎಂದು ಗುರುತಿಸಲಾಗಿದೆ.

RSS ಶರತ್ ಹತ್ಯೆಯ ಪ್ರಮುಖ ಆರೋಪಿ ಬಂಧನ

ಬಂಧಿತ ಜಬ್ಬಾರ್ ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ಜಬ್ಬಾರ್ ನನ್ನು 7 ದಿನಗಳ ಕಾಲ ಪೋಲೀಸ್ ಕಸ್ಟಡಿಗೆ ನೀಡಿದೆ. ಈ ಮೂಲಕ ಶರತ್ ಮಡಿವಾಳ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

One more arrested in connection with Sharath Madival murder case

ಶರತ್ ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿದ್ದ ಶರೀಫ್ ಇದೀಗ ಪೋಲೀಸ್ ವಶದಲ್ಲಿದ್ದು, ವಿಚಾರಣೆಯ ಬಳಿಕ ಇಂದು ಆತನನ್ನು ಪೋಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಶರತ್ ಮಡಿವಾಳ ಹತ್ಯೆ ಪ್ರಕರಣ, ಮತ್ತಿಬ್ಬರು ಆರೋಪಿಗಳ ಬಂಧನ

ಶರತ್ ಹತ್ಯೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೋಲೀಸರು ಈಗಾಗಲೇ 10 ಜನ ಆರೋಪಿಗಳನ್ನು ಬಂಧಿಸಿದ್ದು, ಇನ್ನೂ ಹಲವರಿಗಾಗಿ ಪೋಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಜುಲೈ 4 ರಂದು ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಬಿ.ಸಿ.ರೋಡ್ ನಲ್ಲಿರುವ ತನ್ನ ಲಾಂಡ್ರಿಯ ಕೆಲಸ ಮುಗಿಸಿ ಹೊರಬರುತ್ತಿದ್ದ ಶರತ್ ಮಡಿವಾಳ ಅವರನ್ನು ಬೈಕಿನಲ್ಲಿ ಬಂದ ಮೂವರಿದ್ದ ತಂಡ ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
One more arrested in connection with Sharath Madival murder case. The arrested is identified as Jabbar. The number of arrest has increased to 10 now. The court has ordered for 7 days police custody.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ