ಮಂಗಳೂರಲ್ಲಿ ಆನ್ ಲೈನ್ ವೇಶ್ಯಾವಾಟಿಕೆ : ಐವರ ಬಂಧನ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಜನವರಿ. 12 : ಆನ್ ಲೈನ್ ಮೂಲಕ ವೇಶ್ಯಾವಾಟಿಕೆ ದಂಧೆಯನ್ನು ನಡೆಸುತ್ತಿದ್ದ ಜಾಲವನ್ನು ಬುಧವಾರ ಸಂಜೆ ಮಂಗಳೂರು ಸಿಸಿಬಿ ಪೊಲೀಸರು ಬೇಧಿಸಿದ್ದಾರೆ.

ನಗರದ ಖಾಸಗಿ ಹೋಟೆಲೊಂದರ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಓರ್ವ ಗ್ರಾಹಕ, ಇಬ್ಬರು ದಲ್ಲಾಳಿಗಳು ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 5 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರನ್ನು ಪ್ರೀತಮ್ (30), ಸುನಿಲ್ (22) ಮತ್ತು ನಾಗರಾಜ್ (28) ಎಂದು ಗುರುತಿಸಲಾಗಿದೆ. ವಶಕ್ಕೆ ಪಡೆದುಕೊಂಡ ಯುವತಿಯರನ್ನು ಮಹಿಳಾ ಸ್ವೀಕಾರ ಕೇಂದ್ರಕ್ಕೆ ಹಸ್ತಾಂತರಿಸಲಾಗಿದೆ.

Online Prostitution Racket Busted, five arrested by mangaluru CCB police

ಖಚಿತ ಮಾಹಿತಿಯನ್ನಾಧಾರಿಸಿ ಪೊಲೀಸರು ದಾಳಿ ವೇಳೆ ಆರೋಪಿಗಳು ಎಂಬ ಹೆಸರಿನ ವೆಬ್ ಸೈಟ್ ನಲ್ಲಿ ಈ ಹೈಟೆಕ್ ವೇಶ್ಯಾವಾಟಿಕೆ ದಂಧೆಯನ್ನ ನಡೆಸುತ್ತಿದ್ದರು.

ಅಲ್ಲದೇ ಈ ವೆಬ್ ಸೈಟ್ ನಲ್ಲಿ ಇವರ ಮೊಬೈಲ್ ನಂಬರ್ ಗಳನ್ನು ನಮೂದಿಸಿ ವ್ಯವಹಾರ ಮಾಡುತ್ತಿದ್ದರು. ಈ ಮೊಬೈಲ್ ನಂಬರ್ ಗಳಿಗೆ ಕರೆ ಮಾಡಿದ ಗ್ರಾಹಕರಿಗೆ ಯುವತಿಯರನ್ನು ವೇಶ್ಯಾವಾಟಿಕೆಗಾಗಿ ನೀಡುತ್ತಿದ್ದರು ಎಂಬ ಮಾಹಿತಿ ಬಯಲಾಗಿದೆ.

ವಶಕ್ಕೆ ಪಡೆದುಕೊಂಡ ಯುವತಿಯರನ್ನು ಮಹಿಳಾ ಸ್ವೀಕಾರ ಕೇಂದ್ರಕ್ಕೆ ಹಸ್ತಾಂತರಿಸಲಾಗಿರುತ್ತದೆ. ಆರೋಪಿಗಳಿಂದ 8 ಮೊಬೈಲ್ ಫೋನ್ , ಈ ಹೈಟೆಕ್ ವೇಶ್ಯಾವಾಟಿಕೆ ದಂಧೆಗೆ ಬಳಸುತ್ತಿದ್ದ ಒಂದು ಟಾಟಾ ಸಫಾರಿ ಕಾರು, ಮಾರುತಿ ಅಲ್ಟೋ ಕಾರನ್ನು ಹಾಗೂ 6,700 ರುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಸುನೀಲ್ ವೈ ನಾಯಕ್ ಮತ್ತು ಪಿ.ಎಸ್.ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿ ಈ ಇದನ್ನು ಪತ್ತೆ ಮಾಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Mangaluru CCB police busted an online Prostitution racket by raiding a hotel in Bendurwell and arrested three men including two pimps and rescued 2 women on January 11.
Please Wait while comments are loading...