ಮಂಗಳೂರಿನಲ್ಲಿ ಶುಕ್ರವಾರದಿಂದ ಖಾಸಗಿ ವೈದ್ಯರ ಮುಷ್ಕರ

Posted By:
Subscribe to Oneindia Kannada

ಮಂಗಳೂರು, ನವೆಂಬರ್ 16 : ಸರ್ಕಾರದ ವಿರುದ್ದ ತಿರುಗಿಬಿದ್ದಿರುವ ವೈದ್ಯರು ತಮ್ಮ ಮುಷ್ಕರವನ್ನು ತೀವ್ರ ಗೊಳಿಸಿದ್ದಾರೆ. ಕೆಪಿಎಂಇ ಕಾಯ್ದೆ ಅನುಷ್ಠಾನ ಗೊಳಿಸುವುದನ್ನು ವಿರೋಧಿಸಿ ಕರಾವಳಿಯಲ್ಲಿಯೂ ನಾಳೆಯಿಂದ ಖಾಸಗಿ ಆಸ್ಪತ್ರೆಯ ವೈದ್ಯರು ಆರೋಗ್ಯ ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆಗೆ ಇಳಿಯಲಿದ್ದಾರೆ.

In Pics:ವೈದ್ಯರ ಮುಷ್ಕರ : ಎಲ್ಲಾ ಕಡೆ ಆಸ್ಪತ್ರೆ ಬಂದ್ ಬಂದ್ ಬಂದ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಅನಿರ್ದಿಷ್ಟಾವಧಿಯ ವರೆಗೆ ಎಲ್ಲಾ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್ ಗಳು ಬಂದ್ ಮಾಡಲು ನಿರ್ದರಿಸಲಾಗಿದೆ. ರೋಗಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟು ಭಾರತೀಯ ವೈದ್ಯಕೀಯ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇಂದಿನಿಂದ ಮುಷ್ಕರವನ್ನು ಆರಂಭಿಸದೆ ಮುಷ್ಕರದ ಬಗ್ಗೆ ರೋಗಿಗಳಿಗೆ ಮಾಹಿತಿ ನೀಡಿ ನಾಳೆಯಿಂದ ಅನಿರ್ದಿಷ್ಟಾವಧಿಯವರೆಗೆ ಮುಷ್ಕರ ಆರಂಭಿಸಲು ವೈದ್ಯಕೀಯ ಸಂಘ ನಿರ್ಧರಿಸಿದೆ.

Outpatient services shut in Mangaluru from tomorrow

ನಾಳೆಯಿಂದ ಮುಷ್ಕರ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಕರಾವಳಿಯ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ವಿಭಾಗವು ಸ್ಥಗಿತಗೊಳ್ಳಲಿದೆ .ಆದರೆ ತುರ್ತು ಸೇವೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ವೈದ್ಯಕೀಯ ಸಂಘ ತಿಳಿಸಿದೆ .

ಮಾನವೀಯತೆ ಮರೆತ ವೈದ್ಯರು ನಿಲ್ಲದ ರೋಗಿಗಳ ಅಳಲು

ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಸಣ್ಣ ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಆಸ್ಪತ್ರೆಗಳ ವೈದ್ಯಕೀಯ ಸೇವೆ ಸ್ಥಗಿತಗೊಳ್ಳಲಿದೆ .ಜಿಲ್ಲೆಯ ಕ್ಲಿನಿಕ್ ಗಳು ,ನರ್ಸಿಂಗ್ ಹೋಂ ,ಅಲೋಪತಿ, ಡೆಂಟಲ್, ಆಯುರ್ವೇದ ,ಲ್ಯಾಬೊರೇಟರಿಗಳು ಕೂಡ ನಾಳೆಯಿಂದ ಬಂದ್ ಆಗಲಿದೆ.

Outpatient services shut in Mangaluru from tomorrow

ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆಯಲ್ಲಿ ಯಾವುದೇ ತೊಂದರೆಯಾಗದಂತೆ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲಾಡಳಿತಗ ಕ್ರಮ ಕೈಗೊಂಡಿದೆ.ರಜೆ ಮೇಲೆ ತೆರಳಿರುವ ವೈದ್ಯರ ಹಾಗೂ ಸಿಬ್ಬಂದಿಗಳ ರಜೆಯನ್ನು ರದ್ದುಗೊಳಿಸಿ ಸರ್ಕಾರ ಆದೇಶ ಜಾರಿಗೊಳಿಸಿದೆ . ಚಿಕಿತ್ಸೆ ಪಡೆಯಲು ಸರ್ಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಮಾಡಿಕೊಂಡಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A medical emergency is looming in the city with private hospitals shutting down outpatient services from tomorrow .Doctors attached to private hospitals have been on strike to protest against KPME Bill.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ