ಮಂಗಳೂರು ಉಡುಪಿಯಲ್ಲಿ ರೋಗಿಗಳಿಗೆ ಮುಷ್ಕರದ ಬಿಸಿ

Posted By:
Subscribe to Oneindia Kannada

ಮಂಗಳೂರು/ಉಡುಪಿ, ನವೆಂಬರ್ 03 : ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ (ತಿದ್ದುಪಡಿ) 2017 ಅನ್ನು ವಿರೋಧಿಸಿ ಖಾಸಗಿ ವೈದ್ಯರುಗಳು ನಡೆಸುತ್ತಿರುವ ಪ್ರತಿಭಟನೆಯ ಬಿಸಿ ಮಂಗಳೂರು ಮತ್ತು ಉಡುಪಿ ರೋಗಿಗಳಿಗೂ ಬಲವಾಗಿ ತಟ್ಟಿದೆ.

In Pics : ವೈದ್ಯರ ಮುಷ್ಕರದಿಂದ ರೋಗಿಗಳ ನೀಗದ ಸಂಕಷ್ಟ

ಶುಕ್ರವಾರ ಬೆಳಿಗ್ಗೆ 8 ಗಂಟೆಯಿಂದ ಶನಿವಾರ ಬೆಳಿಗ್ಗೆ 8 ಗಂಟೆಯವರೆಗೆ ಪ್ರತಿಭಟನೆ ಇರಲಿರುವುದರಿಂದ, ಪ್ರತಿಭಟನೆ ಮತ್ತು ಪರಿಸ್ಥಿತಿಯ ಅರಿವಿರದ ರೋಗಿಗಳು ಖಾಸಗಿ ಆಸ್ಪತ್ರೆಗಳತ್ತ ಎಡತಾಕುತ್ತಲೇ ಇದ್ದಾರೆ, ಅಲ್ಲಿ ಹೊರರೋಗಿಗಳಿಗೆ ಸೇವೆ ಸಿಗದೆ ನಿರಾಶರಾಗುತ್ತಿದ್ದಾರೆ.

Patients feel the heat of protest by private doctors in Mangaluru and Udupi

ಮಂಗಳೂರಿನ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಸೇವೆಯನ್ನೂ ಸ್ಥಗಿತಗೊಳಿಸಲಾಗಿದೆ. ಒಳರೋಗಿಗಳಿಗೆ ಮಾತ್ರ ಅವಶ್ಯಕ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇದರಿಂದ ರೋಗಿಗಳಿಗಳಿಗೆ ಹೊರರೋಗಿಗಳ ಘಟಕದಲ್ಲಿ ಮಾತ್ರವಲ್ಲ ತುರ್ತು ಚಿಕಿತ್ಸೆಯೂ ಲಭಿಸುತ್ತಿಲ್ಲ.

ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ, ಸರ್ಕಾರಿ ಆಸ್ಪತ್ರೆಯೇ ದಿಕ್ಕು

ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಲು ಸಿದ್ಧತೆ ನಡೆಸಲಾಗುತ್ತಿದೆ. ಅಲ್ಲದೆ, ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳು 24 ಗಂಟೆಗಳ ಕಾಲ ನಿರಂತರ ಸೇವೆ ಸಲ್ಲಿಸಲು ಸಿದ್ಧವಾಗಿದೆ. ಎಲ್ಲ ಸರಕಾರಿ ವೈದ್ಯರು ರಜಾ ಕ್ಯಾನ್ಸಲ್ ಮಾಡಿ ಸೇವೆಗೆ ಹಾಜರಾಗಬೇಕೆಂದು ಸರಕಾರ ಕೂಡ ಆದೇಶಿಸಿದೆ.

ಉಡುಪಿಯಲ್ಲಿ ಜಿಲ್ಲೆಯ 25ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಯಿಂದ ಮುಷ್ಕರಕ್ಕೆ ಬೆಂಬಲ ವ್ಯಕ್ತವಾಗಿದೆ. 700ಕ್ಕೂ ಅಧಿಕ ಅಲೋಪತಿ, ಆಯುರ್ವೇದ, ಹೋಮಿಯೋಪತಿ ವೈದ್ಯರು ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲಿ ತುರ್ತುಚಿಕಿತ್ಸೆಗೆ ಅವಕಾಶ ನೀಡಲಾಗಿದ್ದು, ಹೊರರೋಗಿಗಳ ವಿಭಾಗ ಬಂದ್ ಆಗಿದೆ. ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ವೈದ್ಯರಿಗೆ ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ ನೀಡಿದ್ದಾರೆ.

ಜಿಲ್ಲೆಯ 61 ಪ್ರಾಥಮಿಕ ಆರೋಗ್ಯ ಕೇಂದ್ರ, 7 ಸಮುದಾಯ ಆರೋಗ್ಯ ಕೇಂದ್ರ, 2 ತಾಲೂಕು ಆಸ್ಪತ್ರೆ, 1 ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ವ್ಯವಸ್ಥೆ ಮಾಡಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Patients feel the heat of protest by private doctors in Mangaluru and Udupi. Private doctors have stayed away from attending patients in OPD protesting against Karnataka Private Medical Establishments (amendment) bill 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ