ಪಿಎಫ್ಐ ಈಗ ನನ್ನನ್ನು ಟಾರ್ಗೆಟ್ ಮಾಡಿದೆ: ಸಚಿವ ಖಾದರ್

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಏಪ್ರಿಲ್ 10: ನಾನು ಮಾನವೀಯತೆ ದೃಷ್ಟಿಯಿಂದ ಖುರೇಶಿಯನ್ನು ನೋಡಲು ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿದ್ದೆ. ಈ ಸಂದರ್ಭದಲ್ಲಿ ಖುರೇಶಿ ಸಹೋದರ ಆತ ಯಾವುದೇ ಸಂಘಟನೆ, ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ. ಆದರೆ ಪಿಎಫ್ಐ ಸಂಘಟನೆ ಮಾತ್ರ ನನ್ನನ್ನು ಟಾರ್ಗೆಟ್ ಮಾಡಿದೆ ಎಂದು ಯುಟಿ ಖಾದರ್ ವ್ಯಂಗ್ಯವಾಗಿ ಹೇಳಿದ್ದಾರೆ.

ಕೊಲೆ ಯತ್ನ ಪ್ರಕರಣವೊಂದರ ಆರೋಪಿ ಅಹ್ಮದ್ ಖುರೇಶಿ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎನ್ನಲಾಗಿರುವ ಪ್ರಕರಣ ಮತ್ತು ಪೊಲೀಸ್ ಕಮಿಷನರ್ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ನಡೆದ ಲಾಠಿಚಾರ್ಜ್ ಗೆ ಸಂಬಂಧಿಸಿದಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಸೋಮವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.[ನನ್ನ ಪೊಲೀಸರ ಮೇಲೆ ಹಲ್ಲೆ ಮಾಡಿದ್ರೆ ಸಹಿಸಲ್ಲ -ಗುಡುಗಿದ ಕಮಿಷನರ್]

PFI targeted me says Minister UT Khader

ಅಹ್ಮದ್ ಖುರೇಶಿ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎನ್ನಲಾಗಿರುವ ಪ್ರಕರಣದ ತನಿಖೆ ನಡೆಸಲು ಶೀಘ್ರವೇ ತನಿಖಾಧಿಕಾರಿಯನ್ನು ನೇಮಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.[ಮಂಗಳೂರು: ಖುರೇಶಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ - ಕೋರ್ಟ್]

ಈ ಘಟನೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವರಿಗೆ ವರದಿ ನೀಡುವ ಸಲುವಾಗಿ ಗಾಯಾಳುಗಳನ್ನು ಭೇಟಿಯಾಗಿದ್ದೆ. ಈ ಪ್ರಕರಣದ ಬಗ್ಗೆ ಶೀಘ್ರ ವರದಿ ಸಲ್ಲಿಸಲಿದ್ದೇನೆ ಎಂದು ಖಾದರ್ ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
‘Popular front of India targeted me, says food and public supply minister U T Khader in a press-meet here in Mangaluru.
Please Wait while comments are loading...