ರಸ್ತೆ ಅಪಘಾತದಲ್ಲಿ ವಿಟ್ಲ ನಿವಾಸಿ ಅಯ್ಯಪ್ಪ ವ್ರತಧಾರಿ ಸಾವು

Posted By: Chethan
Subscribe to Oneindia Kannada

ಮಂಗಳೂರು, ಜನವರಿ 6 : ಪಿಕ್‌ಅಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಅಯ್ಯಪ್ಪ ಮಾಲಾಧಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಕ್ಕಡದ ಉಪ್ಪಾರಪಳಿಕೆ ಎಂಬಲ್ಲಿ ಶುಕ್ರವಾರ ನಡೆದಿದೆ.

Photographer killed in road accident

ಮೃತರನ್ನು ವಿಟ್ಲ ನಿವಾಸಿ ಛಾಯಾಗ್ರಾಹಕ ಧನಂಜಯ ಕಟ್ಟೆ (34) ಎಂದು ಗುರುತಿಸಲಾಗಿದೆ. ಅವರು ತಮ್ಮ ಪತ್ನಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮೃತರು ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Photographer named Dhananjaya Katte killed in road mishap near kokkada.
Please Wait while comments are loading...