ಫೆ.28ರಂದು ಪಿಲಿಕುಳ ನಿಸರ್ಗಧಾಮದಲ್ಲಿ 'ರಾಷ್ಟ್ರೀಯ ವಿಜ್ಞಾನ ದಿನ'

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು,ಫೆಬ್ರವರಿ,25: ರಾಷ್ಟೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಫೆ. 28 ರಂದು ಮಂಗಳೂರಿನಲ್ಲಿ 'ಪಿಲಿಕುಳ ಸಂಭ್ರಮ' ಆಯೋಜನೆಯಾಗಿದ್ದು, ಇದರಲ್ಲಿ ವಿಜ್ಞಾನ ವಸ್ತು ಪ್ರದರ್ಶನ, ಸುಗ್ಗಿ-ಹಿಗ್ಗಿ ವಾಲಿಬಾಲ್ ಪಂದ್ಯಾಟ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎ. ಬಿ. ಇಬ್ರಾಹಿಂ ಮಾಹಿತಿ ನೀಡಿದರು.

ಪಿಲಿಕುಳ ಸಂಭ್ರಮದಲ್ಲಿ 14 ಇಂಜಿನಿಯರಿಂಗ್ ಕಾಲೇಜುಗಳಿಂದ 'ವಿಜ್ಞಾನ ಮತ್ತು ತಂತ್ರಜ್ಞಾನ ಆಧಾರಿತ ಆವಿಷ್ಕಾರಗಳು' ಎಂಬ ವಿಷಯದಲ್ಲಿ ವಿಜ್ಞಾನ ಮಾದರಿಗಳ ಪ್ರದರ್ಶನ ನಡೆಯಲಿದೆ. ಈ ಸಂದರ್ಭ ಜಿಲ್ಲೆಯ ಆಯ್ದ ಹೈಸ್ಕೂಲ್ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಇವರಿಗಾಗಿ ವಿವಿಧ ಸ್ಪರ್ಧೆ ಆಯೋಜಿಸಲಾಗಿದೆ. ತಾರಾಮಂಡಲ ವೀಕ್ಷಣೆಗೂ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಪಿಲಿಕುಳ ವಿಜ್ಞಾನ ಕೇಂದ್ರದ ಡಾ. ಕೆ. ವಿ. ರಾವ್ ಹೇಳಿದರು.[ಪಿಲಿಕುಳ ನಿಸರ್ಗಧಾಮಕ್ಕೆ ಕಾರಂತರ ಹೆಸರಿಡಿ]

Mangaluru

ಪಿಲಿಕುಳ ಸಂಭ್ರಮದ ಅವಧಿಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಾಯಂಕಾಲದ ತನಕ ನಡೆಯಲಿರುವ ಈ ಮೇಲಿನ ಎಲ್ಲಾ ಕಾರ್ಯಕ್ರಮ ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಡೆಯಲಿದೆ ಎಂದು ಪಿಲಿಕುಳ ನಿಸರ್ಗ ಧಾಮದ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಭಾಕರ ಶರ್ಮಾ ತಿಳಿಸಿದರು.

ವಾಲಿಬಾಲ್ ಪಂದ್ಯಾಟ: ಪಿಲಿಕುಳ ಸಂಭ್ರಮದ ಅಂಗವಾಗಿ ಬೆಳಿಗ್ಗೆ 9 ಗಂಟೆಯಿಂದ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ಮಹಿಳಾ ಮತ್ತು ಪುರುಷರ ವಾಲಿಬಾಲ್ ಪಂದ್ಯಾಟ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.[ಮಂಗಳೂರಿನ ಪಿಲಿಕುಳದಲ್ಲಿ ಮೀನು ಮೇಳ]

ನಾಕೌಟ್ ಮಾದರಿಯಲ್ಲಿ ಈ ಪಂದ್ಯಾಟ ನಡೆಯಲಿದ್ದು, ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಮೊದಲ 4 ಸ್ಥಾನಗಳಿಗೆ ಹಾಗೂ ವೈಯಕ್ತಿಕ ಬಹುಮಾನ ನೀಡಲಾಗುತ್ತಿದೆ ಎಂದು ದಕ್ಷಿಣ ಕನ್ನಡ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಸುರೇಶ್ ಬಾಬು ವಿವರ ನೀಡಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Pilikula biological park invites to National Science day in Mangaluru, on February 28th. This is organize science related programmes on 28th.
Please Wait while comments are loading...