ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧರ್ಮಸ್ಥಳದಲ್ಲಿ ಪ್ರಧಾನಿ ಸ್ವಾಗತಕ್ಕೆ ಅಂತಿಮ ಹಂತದ ಸಿದ್ಧತೆ, ಸರ್ಪಗಾವಲು

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಅಕ್ಟೋಬರ್ 28: ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 29 ರಂದು ಮೊದಲ ಬಾರಿಗೆ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ತುಳು ನಾಡು ಸಜ್ಜಾಗುತ್ತಿದೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ತುಳು ಸಂಸ್ಕೃತಿ ಪರಂಪರೆಯಂತೆ ಸ್ವಾಗತ ಕೋರಲು ಭರದ ಸಿದ್ಧತೆ ನಡೆಸಲಾಗುತ್ತಿದೆ.

ಮೋದಿ ಪ್ರಯಾಣಕ್ಕೆ ಮಂಗಳೂರಿಗೆ ಬಂದ ವಿಶೇಷ ಕಾರುಮೋದಿ ಪ್ರಯಾಣಕ್ಕೆ ಮಂಗಳೂರಿಗೆ ಬಂದ ವಿಶೇಷ ಕಾರು

ಪ್ರಧಾನಿ ಮೋದಿ ಭಾನುವಾರ ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು, ಅಲ್ಲಿಂದ ವಾಯುಪಡೆಯ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳ ತಲುಪಲಿದ್ದಾರೆ. ಧರ್ಮಸ್ಥಳದ ಬಳಿಯ ಉಜಿರೆಯಲ್ಲಿ ಬ್ಯಾಟ್ ನಿರ್ಮಿಸಲಾಗಿದೆ. ಪೊಲೀಸರು ಹಾಗೂ ಎಸ್ ಪಿಜಿ ಕಮಾಂಡೋಗಳು ಹೆಲಿಪ್ಯಾಡ್ ಮತ್ತು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ರಸ್ತೆಯ ಇಕ್ಕೆಲಗಳಲ್ಲಿ ತಪಾಸಣೆ ಆರಂಭಿಸಿದ್ದಾರೆ.

In Pics : ಮೋದಿ ಸ್ವಾಗತಕ್ಕೆ ಸಿಂಗಾರಗೊಂಡ ಧರ್ಮಸ್ಥಳ

PM Narendra Modi visit to Dharmasthala, tight security and frequent inspection

ಧರ್ಮಸ್ಥಳದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ ಪರಿಶೀಲನೆಯನ್ನು ವಾಯು ಸೇನೆಯ ಅಧಿಕಾರಿಗಳು ನಡೆಸಿದ್ದಾರೆ . ವಾಯುಸೇನೆಯ ಹೆಲಿಕಾಪ್ಟರ್ ಅನ್ನು ಹೆಲಿಪ್ಯಾಡ್ ನ ಮೇಲೆ ಇಳಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಪ್ರಧಾನಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮಂಜುನಾಥ ಸ್ಚಾಮಿ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ .

ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಪೊಲೀಸ್ ಸರ್ಪಗಾವಲುಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಪೊಲೀಸ್ ಸರ್ಪಗಾವಲು

PM Narendra Modi visit to Dharmasthala, tight security and frequent inspection

ಅಕ್ಟೋಬರ್ 28ರ ಅಂದರೆ ಶನಿವಾರ ರಾತ್ರಿ 9 ಗಂಟೆಯಿಂದ 29ರ ಮದ್ಯಾಹ್ನ 2 ಗಂಟೆಯವರಿಗೆ ದೇವಾಲಯದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಧರ್ಮಸ್ಥಳ ಮುಖ್ಯದ್ವಾರ ಮತ್ತು ಪ್ರವೇಶ ದ್ವಾರಗಳಲ್ಲಿ ಭಾನುವಾರ ಮಧ್ಯಾಹ್ನ 1.30ರವರೆಗೆ ಪ್ರವೇಶವಿರುವುದಿಲ್ಲ. ಧರ್ಮಸ್ಥಳ- ಉಜಿರೆ ಮಧ್ಯೆ ಭಾನುವಾರ ಬೆಳಗ್ಗೆ 9 ಗಂಟೆಯ ಅನಂತರ ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ.

English summary
PM Narendra Modi visit to Dharmasthala on October 29th, Sunday. All set to welcome and security drill take place on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X