ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರಧಾನಿ ಆದೇಶಕ್ಕೂ ಕಿಮ್ಮತ್ತಿಲ್ಲ, ಗ್ರಾಮಸ್ಥರ ಚುನಾವಣೆ ಬಹಿಷ್ಕಾರ

|
Google Oneindia Kannada News

ಮಂಗಳೂರು, ಮಾರ್ಚ್ 12 : ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಲು ಪ್ರಧಾನಮಂತ್ರಿ ಕಾರ್ಯಾಲಯದಿಂದ ಪತ್ರ ಬಂದಿದ್ದರೂ ಅಧಿಕಾರಿಗಳು ಕ್ಯಾರೇ ಎನ್ನದ ಹಿನ್ನೆಲೆಯಲ್ಲಿ ಗ್ರಾಮಸ್ಥರು ವಿಧಾನಸಭಾ ಚುನಾವಣೆ ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಈ ತೀರ್ಮಾನ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊಗ್ರ ಗ್ರಾಮದ ಇತಿಹಾಸ ಪ್ರಸಿದ್ಧ ದೈವಗಳ ಸ್ಥಾನ ಮುಗೆರಡ್ಕಕ್ಕೆ ಸಂಪರ್ಕ ರಸ್ತೆಯಾದ ಕಲ್ಲಮಾಡ - ಉಂತನಾಜೆ - ಮುಗೆರಡ್ಕ ಮರು ಡಾಂಬರು ಕಾಮಗಾರಿಗೆ ಒತ್ತಾಯಿಸಿ ಸ್ಥಳೀಯ ಗ್ರಾಮಸ್ಥರು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯ ವೆಬ್ ಸೈಟ್ ಕನ್ನಡದಲ್ಲಿ ಲಭ್ಯಪ್ರಧಾನಮಂತ್ರಿಗಳ ಕಾರ್ಯಾಲಯ ವೆಬ್ ಸೈಟ್ ಕನ್ನಡದಲ್ಲಿ ಲಭ್ಯ

ಈ ರಸ್ತೆಗೆ ಡಾಂಬರು ಕಾಮಗಾರಿ ನಡೆದು 35 ವರ್ಷಗಳೇ ಕಳೆದಿವೆ. ಕಲ್ಲಮಾಡ- ಊಂತನಾಜೆ-ಅಲೆಕ್ಕಿ- ಮುಗೆರಡ್ಕ ರಸ್ತೆ ಜನೋಪಯೋಗಿ ರಸ್ತೆಯಾಗಿದ್ದು, ಇದು ಹತ್ತಿರದ ರಾಷ್ಟ್ರೀಯ ಹೆದ್ದಾರಿ ಮೂಲಕ ನೆಲ್ಯಾಡಿ, ಕೊಕ್ಕಡ, ಸೌತಡ್ಕ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಡಬ ಹಾಗೂ ಮಂಗಳೂರಿಗೆ ಸಂಪರ್ಕ ಸಾಧಿಸಲು ಅನುಕೂಲವಾಗುತ್ತದೆ.

Bandaaru-Mogra Villagers

ಬಂದಾರು, ಮೊಗ್ರು, ಬೆಳಾಲು, ಕೊಯ್ಯೂರು, ಕಣಿಯೂರು ಮುಂತಾದ ಗ್ರಾಮಸ್ಥರಿಗೆ ಇದು ಅನುಕೂಲಕರ ರಸ್ತೆ. ಅಲ್ಲದೆ ಇತಿಹಾಸ ಪ್ರಸಿದ್ಧ ಮುಗೆರಡ್ಕ ದೈವಸ್ಥಾನಕ್ಕೆ ಈ ರಸ್ತೆಯ ಮೂಲಕವೇ ಹೋಗಬೇಕಾಗಿರುವುದರಿಂದ ಭಕ್ತಾದಿಗಳಿಗೆ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಶಾಲೆ, ಅಂಗನವಾಡಿ, ಅಂಚೆ ಕಚೇರಿ, ಗ್ರಾಮ ಪಂಚಾಯಿತಿ ಕಚೇರಿಗಳಿಗೆ ತೆರಳಲು ಜನರು ಇದೇ ರಸ್ತೆಯನ್ನು ಅವಲಂಭಿಸುತ್ತಾರೆ.

ಬಂದಾರು- ಮೊಗ್ರ ಗ್ರಾಮಸ್ಥರು ಈ ರಸ್ತೆ ದುರಸ್ತಿಗಾಗಿ ಸರಕಾರಕ್ಕೆ ಹಲವು ಬಾರಿ ಮನವಿಯನ್ನು ಸಲ್ಲಿಸಿದ್ದಾರೆ. ಅಲ್ಲದೇ ಸ್ಥಳೀಯ ಶಾಸಕ ವಸಂತ ಬಂಗೇರ ಅವರಿಗೂ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಕೊನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಗ್ರಾಮಸ್ಥರು, ರಸ್ತೆ ದುರಸ್ತಿಗೆ ಮನವಿ ಸಲ್ಲಿಸಿದ್ದರು.

Bandaaru- Mogra Road

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಪ್ರಧಾನ ಮಂತ್ರಿ ಕಾರ್ಯಾಲಯ, ಈ ಕುರಿತಂತೆ ಕ್ರಮ ಕೈಗೊಳ್ಳಲು ಸ್ಥಳೀಯ ಆಡಳಿತಕ್ಕೆ ಪತ್ರ ಬರೆದಿತ್ತು. ಆದರೆ ಪ್ರಧಾನಿ ಕಾರ್ಯಾಲಯದಿಂದ ಬಂದ ಪತ್ರಕ್ಕೂ ಕ್ಯಾರೇ ಅನ್ನದ ಅಧಿಕಾರಿಗಳು, ಯಾವುದೇ ಕ್ರಮ ಕೈಗೊಂಡಿಲ್ಲ.

ಬೇಸತ್ತ ಗ್ರಾಮಸ್ಥರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ಬಂದಾರು-ಮೊಗ್ರ ಗ್ರಾಮದಲ್ಲಿ 90ಕ್ಕೂ ಅಧಿಕ ಕುಟುಂಬಗಳಿದ್ದು, 500ಕ್ಕೂ ಅಧಿಕ ಮತದಾರರಿದ್ದಾರೆ.

English summary
PMO letter also neglected by Gram pachayat bureaucrats in Belthangady taluk Bandaaru- Mogra village in Dakshina Kannada. Villagers decided to not to vote in Karnataka assembly elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X