ಮಂಗಳೂರು: ಹಿಂದೂ ಮುಖಂಡರ ಮನೆಗಳ ಮೇಲೆ ಪೊಲೀಸರ ದಾಳಿ ನಿಲ್ಲಲಿ

Posted By:
Subscribe to Oneindia Kannada

ಮಂಗಳೂರು, ಜುಲೈ 14 : ಹಿಂದೂ ಸಂಘಟನೆಗಳ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ಮಾಡುವುದನ್ನು ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಗೋಪಾಲ್ ಎಚ್ಚರಿಸಿದ್ದಾರೆ.

ಶುಕ್ರವಾರ ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, "ಹಿಂದೂ ಸಂಘಟನೆಯ ಮುಖಂಡರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಪೊಲೀಸರು ಬಂಧನಕ್ಕೆ ಮುಂದಾಗುತ್ತಿದ್ದಾರೆ. ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿ ಕುಟುಂಬಸ್ಥರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ" ಎಂದು ಆರೋಪಿಸಿದರು.

ಶರತ್ ಕೊಲೆ ಆರೋಪಿಗಳ ಶೀಘ್ರ ಬಂಧನ - ಎಡಿಜಿಪಿ ಅಲೋಕ್ ಮೋಹನ್

Police are conducting daily midnight raids on Hindu leaders house says Gopal G in Mangaluru

ಪೊಲೀಸರು ದಾಳಿ ನಡೆಸುವುದನ್ನು ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು. ಮುಂದಿನ ಅನಾಹುತಗಳಿಗೆ ರಾಜ್ಯ ಸರಕಾರವೇ ನೇರ ಹೊಣೆಯಾಗಲಿದೆ ಎಂದು ಅವರು ಎಚ್ಚರಿಸಿದರು.

ರಾಜ್ಯ ಸರಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ತುಷ್ಠೀಕರಣದ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಎಸ್ ಡಿಪಿಐ ಮುಖಂಡ ಅಶ್ರಫ್ ಕೊಲೆ ಪ್ರಕರಣವನ್ನು 48 ಗಂಟೆಗಳಲ್ಲಿ ಭೇದಿಸಿದ ಪೊಲೀಸರಿಗೆ ಆರ್ ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಹತ್ಯೆ ನಡೆದ 7 ದಿನಗಳು ಕಳೆದರೂ ಕೊಲೆಗಡುಕರನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ" ಎಂದು ದೂರಿದರು.

ರಾಜ್ಯದಲ್ಲಿ ಮತಾಂಧರನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಕಿಡಿಕಾರಿದ ಅವರು ಪೊಲೀಸ್ ಅಧಿಕಾರಿಗಳ ಮೇಲೆ ಅನಾವಶ್ಯಕ ಒತ್ತಡ ಹೇರಿ ಪಕ್ಷಪಾತ ಧೋರಣೆಗೆ ಕಾರಣರಾಗುತ್ತಿರುವ ನಿವೃತ್ತ ಪೊಲೀಸ್ ಅಧಿಕಾರಿ ಕೆಂಪಯ್ಯ ಅವರನ್ನು ವಾಪಾಸ್ ಕರೆಸಿಕೊಳ್ಳಬೇಕೆಂದು ಒತ್ತಾಯಿಸಿದರು.

ಉಡುಪಿಯ ಪೇಜಾವರ ಸ್ವಾಮಿಜಿಯವರ 5ನೇ ಪರ್ಯಾಯದ ಸಮಯದಲ್ಲಿ ವಿಶ್ವಹಿಂದೂ ಪರಿಷತ್ ಬರುವ ನವೆಂಬರ್ 24,25,26 ರಂದು 3 ದಿನಗಳ ಕಾಲ ಸಂತರ ಮಹಾಸಭೆ ಧರ್ಮ ಸಂಸದ್ ನಡೆಯಲಿದ್ದು,ದೇಶದ ವಿವಿಧ ಭಾಗಗಳ 2 ಸಾವಿರಕ್ಕೂ ಹೆಚ್ಚು ಸಂತರು ಈ ಧರ್ಮ ಸಂಸತ್ ನಲ್ಲಿ ಪಾಲ್ಗೊಳ್ಳಲಿದ್ದು ಮತಾಂತರ ತಡೆ, ಗೋವಂಶ ರಕ್ಷಣೆ, ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ವಿಚಾರದ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
"Police are conducting daily midnight raids on Hindu leaders especially on Satyajit Suratkal and Sharan Pumpwell.They are threatening their families members, including ladies using abusing language.This is the final warning to the police and to the state government.If they continue the raids today also we won't sit calm, and the state government will be responsible for the aftermath, VHP Mangaluru region secretary Gopal G warned in press meet.
Please Wait while comments are loading...