ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ಕಾರಾಗೃಹದ ಮೇಲೆ ಪೊಲೀಸರ ದಿಢೀರ್ ದಾಳಿ, ನಿಷೇಧಿತ ವಸ್ತು ವಶ

|
Google Oneindia Kannada News

ಮಂಗಳೂರು, ಏಪ್ರಿಲ್ 15: ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿದ ಘಟನೆ ಶನಿವಾರ ಸಂಜೆ ನಡೆದಿದೆ. ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಿಗೆ ನಿಷೇಧಿತ ವಸ್ತುಗಳು ಸರಬರಾಜಾಗುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಕಾರಾಗೃಹಕ್ಕೆ ದಿಢೀರ್ ದಾಳಿ ನಡೆಸಿದೆ.

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ 40ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರಾಗೃಹದ ಮೇಲೆ ದಾಳಿ ನಡೆಸಿ, ಕಾರಾಗೃಹದಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳು ಕಾರಾಗೃಹದ ಕೈದಿಗಳಿಂದ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Police conducted surprise raid on Mangaluru Jail on Saturday evening

ದಾಳಿಯ ವೇಳೆ ಜೈಲಿನೊಳಗೆ ಸಿಗರೇಟ್, ಬೀಡಿ, ತಂಬಾಕು, ಲೈಟರ್, ಕಟ್ಟರ್, ಗಾಂಜಾ ಪ್ಯಾಕೇಟ್ ಸೇರದಂತೆ ಸಿಮ್, ಮೊಬೈಲ್ ಮತ್ತಿತರ ವಸ್ತುಗಳು ಪತ್ತೆಯಾಗಿವೆ. ಇವುಗಳನ್ನು ಬರ್ಕೆ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Police conducted surprise raid on Mangaluru Jail on Saturday evening

ಮಂಗಳೂರು ಡಿಸಿಪಿ ಹನುಮಂತರಾಯ ಮತ್ತು ಡಿಸಿಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

English summary
Mangaluru police team launched a surprised search operation on Mangaluru Jail on April 15. More than 40 police officials and staff take part in the surprise raid. During raid restricted items found in the jail.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X