ಸಾಮಾಜಿಕ ಜಾಲತಾಣದಲ್ಲಿ ಸಿಎಂಗೆ ವ್ಯಂಗ್ಯ, ಪೊಲೀಸ್ ಪೇದೆ ಅಮಾನತು

Posted By:
Subscribe to Oneindia Kannada

ಮಂಗಳೂರು, ನವೆಂಬರ್ 3: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯದ ಸಂದೇಶ ಪ್ರಕಟಿಸಿದ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಅಮಾನತು ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯ ಕಾನ್ಸ್'ಟೇಬಲ್ ರಾಜ ಶಿವಪ್ಪ ಬೆಣ್ಣೆ ಅಮಾನತುಗೊಂಡ ಪೊಲೀಸ್ ಸಿಬ್ಬಂದಿಯಾಗಿದ್ದಾರೆ.

ಇವರು ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಮಾನಿಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪ್ರಕಟಿಸಿದ್ದರು. ಇದರ ವಿರುದ್ಧ ದೂರು ಕೂಡ ಸಲ್ಲಿಕೆಯಾಗಿತ್ತು. ಇದೀಗ ಅವರನ್ನು ಕೆಲಸದಿಂದ ವಜಾ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಆಗಿದ್ದೇನು?

ಆಗಿದ್ದೇನು?

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಪ್ರಧಾನಿ ನರೇಂದ್ರ ಮೋದಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ ಸಂದರ್ಭದಲ್ಲಿ ಮೀನಿನ ಊಟದ ವಿವಾದ ಭುಗಿಲೆದ್ದಿತ್ತು. ಅದನ್ನೇ ವ್ಯಂಗ್ಯವಾಗಿಸಿ ಮುಖ್ಯಮಂತ್ರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿಯನ್ನು ತುಲನೆ ಮಾಡಿ ರಾಜ ಶಿವಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಪಮಾನಿಸಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರಹ ಪ್ರಕಟಿಸಿದ್ದರು.

ಮಾಂಸದ ಊಟ ಮಾಡಿ ದೇವರ ದರ್ಶನ

ಮಾಂಸದ ಊಟ ಮಾಡಿ ದೇವರ ದರ್ಶನ

"ಕೋಟ್ಯಂತರ ಹಿಂದೂ ಜನ ಆರಾಧಿಸುವ ನಾಡಿನ ಪ್ರಮುಖ ದೇವಸ್ಥಾನದಲ್ಲಿ ಮಾಂಸದ ಊಟ ಸೇವಿಸಿ ದೇವರ ದರ್ಶನ ಮಾಡಿದ ಮುಖ್ಯಮಂತ್ರಿ "ಎಂದು ಬರೆದು ರಾಜಾ ಶಿವಪ್ಪ ಚಿತ್ರ ಪ್ರಕಟಿಸಿದ್ದರು.

'ಸಿದ್ದು ಖಾನ್'

'ಸಿದ್ದು ಖಾನ್'

ಇನ್ನೊಂದೆಡೆ, "ನೋಡಿ ನಮ್ಮ ಸಿದ್ದು ಖಾನ್ ಹೇಳ್ತಾರೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು." ಆದರೆ "ಮೈಲಾರಿ ಕಂಡಾಗ ಸಿಡುಕಿದ ಮುಖ, ಮುಲ್ಲಾನನ್ನು ಕಂಡಾಗ ಅರಳಿದ ಮುಖ" ಎಂದು ಬರೆದು ಫೋಟೋ ಫೇಸ್ ಬುಕ್ ನಲ್ಲಿ ಪ್ರಕಟಿಸಿದ್ದರು.

ಅಲ್ಲದೆ ಮುಖ್ಯಮಂತ್ರಿಯವರನ್ನು "ಸಿದ್ದು ಖಾನ್ " ಎಂದು ಸಂಬೋಧಿಸಿ ಬರಹ ಪ್ರಕಟಿಸಿದ್ದು ಕಾಂಗ್ರೆಸ್ ಮುಖಂಡರ ಕೆಂಗಣ್ಣಿಗೆ ಕಾರಣವಾಗಿತ್ತು.

ದೂರು ನೀಡಿದ್ದ ಕಾಂಗ್ರೆಸ್

ದೂರು ನೀಡಿದ್ದ ಕಾಂಗ್ರೆಸ್

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಪೊಲೀಸ್ ಸಿಬ್ಬಂದಿ ರಾಜ ಶಿವಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಒತ್ತಾಯಿಸಿದ್ದಾರೆ. ಈ ಕುರಿತು ನವೆಂಬರ್ 1ರಂದು ಯುವ ಕಾಂಗ್ರೆಸ್ ಮುಖಂಡರು ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಸಿಬ್ಬಂದಿ ರಾಜ ಶಿವಪ್ಪ ಅವರ ವಿರುದ್ಧ ದೂರು ಸಲ್ಲಿಸಿದ್ದರು. ತಕ್ಷಣವೇ ಕಠಿಣ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದರು.

ಇದೀಗ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಪೊಲೀಸ್ ಪೇದೆಯನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A constable attached to Belthangady police station, who had allegedly shared derogatory messages about Chief Minister Siddaramaiah, has been suspended.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ