ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚುನಾವಣೆ : ಉಡುಪಿ, ಮಂಗಳೂರಿನಲ್ಲಿ ಬಿಗಿ ಭದ್ರತೆ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಫೆಬ್ರವರಿ 18 : ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಫೆಬ್ರವರಿ 20ರ ಶನಿವಾರ ಮೂರು ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.

ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಪೊಲೀಸ್ ಬಂದೋಬಸ್ತ್ ಕುರಿತು ಮಾಹಿತಿ ನೀಡಿದರು. ಫೆ.20ರಂದು ಉಡುಪಿ, ಮಂಗಳೂರು ಸೇರಿದಂತೆ 15 ರಾಜ್ಯದ 15 ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ. [ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ವಿವರಗಳು]

alok mohan adgp

ಮತದಾನಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 824 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ಇವುಗಳಲ್ಲಿ 103 ಅತೀ ಸೂಕ್ಷ್ಮ, 289 ಸೂಕ್ಷ್ಮ ಹಾಗೂ 389 ಸಾಮಾನ್ಯ ಮತಗಟ್ಟೆಗಳಾಗಿವೆ. ಉಡುಪಿಯಲ್ಲಿ 936 ಮತಗಟ್ಟೆಗಳ ಪೈಕಿ 51 ಅತೀ ಸೂಕ್ಷ್ಮ, 142 ಸೂಕ್ಷ್ಮ, 689 ಸಾಮಾನ್ಯ ಮತಗಟ್ಟೆಗಳಾಗಿವೆ. ಚಿಕ್ಕಮಗಳೂರಿನಲ್ಲಿ 977 ಮತಗಟ್ಟೆಗಳಲ್ಲಿ 114 ಅತೀ ಸೂಕ್ಷ್ಮ, 301 ಸೂಕ್ಷ್ಮ, 523 ಸಾಮಾನ್ಯ ಮತಗಟ್ಟೆಗಳಾಗಿವೆ. [ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ವೇಳಾಪಟ್ಟಿ]

ಪೊಲೀಸ್ ಸಿಬ್ಬಂದಿಗಳು : ಮೂರು ಜಿಲ್ಲೆಗಳಲ್ಲಿ ಮತದಾನದ ದಿನ ಭದ್ರತೆಗಾಗಿ 2,500 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. 2,000 ಗೃಹ ರಕ್ಷಕರು ಹಾಗೂ ಕೆಎಸ್ಆರ್‌ಪಿಯ 25 ತುಗುಡಿಗಳನ್ನು ನಿಯೋಜಿಸಲಾಗಿದೆ.

ಅಂದಹಾಗೆ ಫೆ.20ರ ಶನಿವಾರ ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಉಡುಪಿ, ಬೀದರ್ ಸೇರಿದಂತೆ 15 ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ.

English summary
We had made all security arrangements for zilla panchayat (ZP) and taluk panchayat (TP) elections scheduled on February 20, 2016 said, Alok Mohan ADGP (law and order) in Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X