ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎತ್ತಿನಹೊಳೆ ಯೋಜನೆ ತೀರ್ಪು, ಮಂಗಳೂರಿನಲ್ಲಿ ಪ್ರಾರ್ಥನೆ

By ಒನ್ ಇಂಡಿಯಾ ಪ್ರತಿನಿಧಿ
|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 12 : ಎತ್ತಿನಹೊಳೆ ಯೋಜನೆ ವಿರುದ್ಧವಾಗಿ ತೀರ್ಪು ಬರುವಂತೆ ಕೋರಿ ಸೆ.14ರಂದು ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಮಂಗಳೂರಿನ ಧಾರ್ಮಿಕ ಕ್ಷೇತ್ರಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿದೆ. ಸೆ.21ರಂದು ತೀರ್ಪು ಪ್ರಕಟಗೊಳ್ಳುವ ನಿರೀಕ್ಷೆ ಇದೆ.

ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ವತಿಯಿಂದ ಸರ್ವಧರ್ಮ ಪ್ರಾರ್ಥನೆ ಆಯೋಜಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಹೇಳಿದ್ದಾರೆ. ಬೆಳಗ್ಗೆ 8.30 ರಿಂದ ಕದ್ರಿ ದೇವಸ್ಥಾನದಲ್ಲಿ, 10 ಗಂಟೆಗೆ ಮಿಲಾಗ್ರಿಸ್ ಚರ್ಚ್, 11 ಗಂಟೆಗೆ ಮಂಗಳಾದೇವಿ ದೇವಸ್ಥಾನ, 12 ಗಂಟೆಗೆ ಉಳ್ಳಾಲ ದರ್ಗಾ ಹಾಗೂ 1 ಗಂಟೆಗೆ ಕುದ್ರೋಳಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ.[ಎತ್ತಿನಹೊಳೆ ಯೋಜನೆಗೆ ವೇಗ ನೀಡಲಿದೆ ಸರ್ಕಾರ]

Prayer in Mangaluru for Yettinhole Project verdict

ಎತ್ತಿನ ಹೊಳೆ ಯೋಜನೆ ವಿವಾದದ ಕುರಿತ ವಿಚಾರಣೆ ದೆಹಲಿಯ ರಾಷ್ಟ್ರೀಯ ಹಸಿರು ಪೀಠದಲ್ಲಿ ನಡೆಯುತ್ತಿದೆ. ಸೆ.21ರಂದು ಅಂತಿಮ ತೀರ್ಪು ಪ್ರಕಟವಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಯೋಜನೆ ವಿರುದ್ಧವಾಗಿ ತೀರ್ಪು ಬರುವಂತೆ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ.['ಎತ್ತಿನಹೊಳೆ ಯೋಜನೆ ವಿರೋಧಕ್ಕೆ ಅರ್ಥವಿಲ್ಲ']

'ಎತ್ತಿನಹೊಳೆ ಯೋಜನೆಯನ್ನು ಕೈಬಿಡಬೇಕು ಎಂಬ ನಮ್ಮ ಹೋರಾಟಕ್ಕೆ ಮುಖ್ಯಮಂತ್ರಿ ಯಾವುದೇ ರೀತಿಯ ಬೆಲೆ ಕೊಟ್ಟಿಲ್ಲ. ಒಂದು ಕಡೆ ಮಾತುಕತೆ ನಡೆಸುವುದಾಗಿ ಹೇಳಿರುವ ಅವರು, ಮತ್ತೊಂದೆಡೆ ಯೋಜನೆ ಮಾಡಿಯೇ ಸಿದ್ಧ ಎಂಬ ಹೇಳಿಕೆ ನೀಡುವ ಮೂಲಕ ಕರಾವಳಿ ಜನರ ಭಾವನೆಗಳನ್ನು ನಿರ್ಲಕ್ಷಿಸಿದ್ದಾರೆ' ಎಂದು ವಿಜಯಕುಮಾರ್ ಶೆಟ್ಟಿ ಆರೋಪಿಸಿದರು.[ಎತ್ತಿನಹೊಳೆ ಯೋಜನೆ ಬಗ್ಗೆ ಆತಂಕ ಬೇಡ : ಸಿದ್ದರಾಮಯ್ಯ]

ಹರಿಕೃಷ್ಣ ಬಂಟ್ವಾಳ್ ಮಾತನಾಡಿ, 'ಎತ್ತಿನಹೊಳೆ ಯೋಜನೆಯನ್ನು ಜಾರಿಗೊಳಿಸಿದರೆ ಕರಾವಳಿಗೆ ಉಂಟಾಗುವ ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಜೊತೆಗೆ ಮಾತುಕತೆ ನಡೆಸುವುದಾಗಿ ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಭರವಸೆ ನೀಡಿದ್ದರು. ಆದರೆ ಈಗ ಭರವಸೆ ಹುಸಿಯಾಗಿದೆ. ಈ ಬಗ್ಗೆ ಫರ್ನಾಂಡಿಸ್ ಸ್ಪಷ್ಟೀಕರಣ ನೀಡಬೇಕು' ಎಂದು ಒತ್ತಾಯಿಸಿದರು.

ಏನಿದು ಎತ್ತಿನಹೊಳೆ ಯೋಜನೆ? : ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡಂತೆ ರಾಜ್ಯದ 7 ಜಿಲ್ಲೆಗಳ 28 ತಾಲ್ಲೂಕುಗಳ 68.5 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ ಅನುಷ್ಟಾನಗೊಳಿಸುತ್ತಿದೆ. ಕರಾವಳಿ ಭಾಗದಲ್ಲಿ ಈ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿದೆ.

English summary
Prayers to be held in temples, church and mosque for Yettinhole Project on September 14, 2016 at Mangaluru. Project was strongly opposed in Dakshina Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X