ಮಂಗಳೂರು : ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಜನವರಿ 01 : ಹೊಸ ವರ್ಷದ ಪಾರ್ಟಿ ಮುಗಿಸಿಕೊಂಡು ಬರುತ್ತಿದ್ದ ವಿದ್ಯಾರ್ಥಿಯೊಬ್ಬ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಿದ್ಯಾರ್ಥಿಯ ಸ್ನೇಹಿತನೂ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮೃತಪಟ್ಟ ವಿದ್ಯಾರ್ಥಿಯನ್ನು ಮಂಗಳೂರಿನ ವೆಸ್ಟರ್ನ್ ಕಾಲೇಜಿನ ವಿದ್ಯಾರ್ಥಿ ವಿನ್ಸಿ ಎಂದು ಗುರುತಿಸಲಾಗಿದೆ. ಹೊಸ ವರ್ಷದ ಪಾರ್ಟಿ ಮುಗಿಸಿ ವಿನ್ಸಿ ಹಾಗೂ ಆತನ ಸ್ನೇಹಿತ 12.30ರ ಸುಮಾರಿಗೆ ಮನೆಗೆ ವಾಪಸ್ ಆಗುವಾಗ ಈ ಅಪಘಾತ ಸಂಭವಿಸಿದೆ. [2015ರಲ್ಲಿ ನಮ್ಮಗಲಿದ ಗಣ್ಯರು, ರಾಜಕಾರಣಿಗಳು]

road accident

ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಕೊಟ್ಟಾರ ಚೌಕಿ ಎಂಬಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಬೈಕ್ ಹೊಡೆದಿದ್ದು, ವಿನ್ಸಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆತನ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. [2015ರಲ್ಲಿ ದೇಶದಲ್ಲಿ ಸುದ್ದಿ ಮಾಡಿದ 8 ವಿದ್ಯಮಾನ]

ಕದ್ರಿ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೊಸ ವರ್ಷದ ಸಂಭ್ರಮದಲ್ಲಿ ಮದ್ಯ ಸೇವಿಸಿದ್ದು, ಜೊತೆಗೆ ಅತೀ ವೇಗದಿಂದ ಬೈಕ್ ಓಡಿಸುತ್ತಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಯುವಕನಿಗೆ ಚಾಕು ಇರಿತ : ಬೆಂಗಳೂರಿನ ಬ್ರಿಗೇಡ್‌ ಹಾಗೂ ಎಂ.ಜಿ.ರಸ್ತೆಯ ಜಂಕ್ಷನ್‌ ಬಳಿ ಗುರುವಾರ ರಾತ್ರಿ 12.15ರ ಸುಮಾರಿಗೆ ಸಂಭ್ರಮಾಚರಣೆಯಲ್ಲಿದ್ದ ಯುವಕನಿಗೆ ಕಿಡಿಗೇಡಿಗಳು ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ. ಯುವಕನನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಬೌರಿಂಗ್ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ. ಜನದಟ್ಟಣೆ ಹೆಚ್ಚಾಗಿದ್ದರಿಂದ ಯಾರು ಚಾಕು ಚುಚ್ಚಿದ್ದಾರೆ ಎಂದು ತಿಳಿದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
PUC student Vincy killed in a road accident at Mangaluru on Friday early morning after he returning to home form new year party. Kadri traffic police registered the case.
Please Wait while comments are loading...