ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪುತ್ತೂರು-ಉಪ್ಪಿನಂಗಡಿ ನಡುವೆ 4 ಪಥದ ರಸ್ತೆ ನಿರ್ಮಾಣ

By Gururaj
|
Google Oneindia Kannada News

ಮಂಗಳೂರು, ಜೂನ್ 21 : ಪುತ್ತೂರು-ಉಪ್ಪಿನಂಗಡಿ ಮಾರ್ಗವನ್ನು 4 ಪಥದ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗುತ್ತದೆ. 4.15 ಕೋಟಿ ರೂ.ಗಳ ಯೋಜನೆಗೆ ಈಗಾಗಲೇ ಒಪ್ಪಿಗೆ ಸಿಕ್ಕಿದೆ.

ಲೋಕೋಪಯೋಗಿ ಇಲಾಖೆಯ ಪುತ್ತೂರು ವಿಭಾಗ ಈ ಕಾಮಗಾರಿಯನ್ನು ಕೈಗೊಳ್ಳಲಿದೆ. ಮಾರ್ಚ್ ತಿಂಗಳಿನಲ್ಲಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಮಳೆಗಾಲ ಮುಗಿದ ಬಳಿಕ ಕಾಮಗಾರಿ ಆರಂಭವಾಗಲಿದೆ.

ಬೆಂಗಳೂರು-ಮೈಸೂರು ಮಾರ್ಗಕ್ಕಾಗಿ 200 ಮರಗಳಿಗೆ ಕೊಡಲಿ?ಬೆಂಗಳೂರು-ಮೈಸೂರು ಮಾರ್ಗಕ್ಕಾಗಿ 200 ಮರಗಳಿಗೆ ಕೊಡಲಿ?

ಪುತ್ತೂರು-ಉಪ್ಪಿನಂಗಡಿ ರಸ್ತೆಯನ್ನು ಪಡೀಲ್‌ನಿಂದ ಕೆಮ್ಮಾಯಿ ಪೆಟ್ರೋಲ್ ಬಂಕ್ ವರೆಗೆ 800 ಮೀ.ರಸ್ತೆಯನ್ನು 4 ಪಥದ ರಸ್ತೆಯಾಗಿ ಮಾಡಲಾಗುತ್ತದೆ. ದಾರಂದಕುಕ್ಕು ಬಳಿಯಿಂದ ಕೋಡಿಂಬಾಂಡಿ ಶಾಲೆವರೆಗಿನ ರಸ್ತೆಯನ್ನು ಅಗಲೀಕರಣ ಮಾಡಿ, ಅಭಿವೃದ್ಧಿ ಪಡಿಸಲಾಗುತ್ತದೆ.

Puttur-Uppinangadi road to be made 4 lane

ಮಾರ್ಚ್ ತಿಂಗಳಿನಲ್ಲಿ ಈ ಯೋಜನೆಯ ಟೆಂಡರ್ ಪ್ರಕ್ರಿಯೆ ಮುಗಿದೆ. ಆದರೆ, ತಾಂತ್ರಿಕ ಕಾರಣಗಳಿಂದಾಗಿ ಇನ್ನೂ ಕಾಮಗಾರಿ ಆರಂಭವಾಗಿಲ್ಲ. ಮಳೆಗಾಲ ಮುಗಿದ ಬಳಿಕ ಕಾಮಗಾರಿ ಆರಂಭವಾಗಲಿದೆ.

85 ಮರಕ್ಕೆ ಕೊಡಲಿ : ರಸ್ತೆ ಅಗಲೀಕರಣಕ್ಕಾಗಿ 85 ಮರಗಳನ್ನು ಕತ್ತರಿಸಬೇಕಿದೆ. ಇದಕ್ಕಾಗಿ ಅರಣ್ಯ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಕಳುಹಿಸಲಾಗಿದೆ. ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಪ್ರಕ್ರಿಯೆಯನ್ನು ಕೆಲವೇ ದಿನಗಳಲ್ಲಿ ಇಲಾಖೆ ಆರಂಭಿಸಲಿದೆ.

English summary
Puttur division Public Works Department (PWD) will develop Puttur-Uppinangadi road to 4 lane. Tender process completed for the 4.15 core project, works may start within two months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X