ಮಾ. 20ರಿಂದ ವಿಶೇಷ ಬಸ್ ನಲ್ಲಿ ರಾಹುಲ್ ಗಾಂಧಿ ಕರಾವಳಿ ಪ್ರವಾಸ

Posted By:
Subscribe to Oneindia Kannada

ಮಂಗಳೂರು, ಮಾರ್ಚ್ 12: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕರಾವಳಿಯಲ್ಲಿ ಪ್ರಚಾರದ ಪರ್ವ ಜೋರಾಗಿದೆ. ಕರಾವಳಿಯ ಜಿಲ್ಲೆಗಳಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಒಂದು ಸುತ್ತಿನ ಚುನಾವಣಾ ಪ್ರಚಾರ ಪ್ರವಾಸ ಮುಗಿಸಿ ತೆರಳಿದ್ದಾರೆ. ಇನ್ನೊಂದೆಡೆ ಬಿಜೆಪಿ ಜನಸುರಕ್ಷಾ ಯಾತ್ರೆ ನಡೆಸಿ ಯಶಸ್ವಿಯಾಗಿದೆ.

ಒಂದೆಡೆ ಬಿಜೆಪಿ ಕರಾವಳಿ ಜಿಲ್ಲೆಗಳಲ್ಲಿ ಚುನಾವಣಾ ರಣತಂತ್ರ ಹೆಣೆಯುತ್ತಿದೆ. ಇನ್ನೊಂದೆಡೆ ಕಾಂಗ್ರೆಸ್ ಕೂಡ ಮತದಾರರನ್ನು ಸೆಳೆಯಲು ಕಾರ್ಯತಂತ್ರ ರೂಪಿಸುತ್ತಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರದ ಭಾಗವಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.

ವೈರಲ್ ವಿಡಿಯೋ: ಚಪ್ಪಾಳೆ ಗಿಟ್ಟಿಸಿದ ರಾಹುಲ್ ಮಾತಿನ ವೈಖರಿ

ಇದೇ ಬರುವ ಮಾರ್ಚ್ 20 ಹಾಗೂ 21 ರಂದು ರಾಹುಲ್ ಗಾಂಧಿ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ನಡೆಸಲಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿರುವ ರಾಹುಲ್ ಗಾಂಧಿ ಅಲ್ಲಲ್ಲಿ ರೋಡ್ ಶೋ , ಸಾರ್ವಜನಿಕರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

Rahul Gandhi going to visit coastal districts on March 20

ಚುನಾವಣಾ ಪ್ರಚಾರದ ಭಾಗವಾಗಿ ಮಂಗಳೂರಿನಲ್ಲಿ ಬೃಹತ್ ಜನಾಶೀರ್ವಾದ ಸಮಾವೇಶ ನಡೆಸಲು ಯೋಜನೆ ರೂಪಿಸಲಾಗಿದೆ. ಸಮಾವೇಶ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕೈ ಪಾಳಯದಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಮಂಗಳೂರಿನ ನೆಹರೂ ಮೈದಾನದಲ್ಲಿ ಈ ಬೃಹತ್ ಸಮಾವೇಶ ನಡೆಯಲಿದೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

   ರಾಹುಲ್ ಗಾಂಧಿ ಸಿಂಗಪೂರ್ ನಲ್ಲಿ ಮಾಡಿದ ಭಾಷಣಕ್ಕೆ ಚಪ್ಪಾಳೆ ಸುರಿಮಳೆ | Oneindia Kannada

   ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳಿಗೂ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಅವರೊಂದಿಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕರು ಇರಲಿದ್ದಾರೆ. ಕರಾವಳಿಯ ಉಭಯ ಜಿಲ್ಲೆಗಳಲ್ಲಿ ರಾಹುಲ್ ಗಾಂಧಿ ವಿಶೇಷವಾಗಿ ಸಿದ್ಧಪಡಿಸಲಾಗಿರುವ ಬಸ್ ಮೂಲಕ ಸಂಚರಿಸಲಿದ್ದಾರೆ. ರಾಹುಲ್ ಭೇಟಿಯ ಸಂಪೂರ್ಣ ರೂಪುರೇಷೆ ಇನ್ನಷ್ಟೇ ನಿರ್ಧಾರವಾಗಬೇಕಿದೆ.

   ಕರಾವಳಿ ಜಿಲ್ಲೆಗಳಲ್ಲಿ ಮಾ. 20, 21ರಂದು ರಾಹುಲ್ ಪ್ರವಾಸ

   ಹೈದ್ರಾಬಾದ್ ಕರ್ನಾಟಕ ಪ್ರವಾಸ ಸಂದರ್ಭದಲ್ಲಿ ಖಾರಾ ಮಿರ್ಚಿ ಮಂಡಕ್ಕಿಯ ರುಚಿ ಸವಿದಿದ್ದ ರಾಹುಲ್ ಗಾಂಧಿ, ಕರಾವಳಿಯಲ್ಲಿ ಗೋಳಿಬಜೆ, ಪತ್ರೋಡೆ , ಪುಂಡಿಗಸಿ, ಕೋರಿ ಸುಕ್ಕಾ, ನೀರ್ ದೋಸೆ ಟೇಸ್ಟ್ ಮಾಡಲಿದ್ದಾರಾ ಕಾದು ನೋಡಬೇಕಿದೆ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   Congress is planning to hold a mega rally in Dakshina Kannada and Udupi districts. Rahul Gandhi going to do road shows in Dakshina Kannada and Udupi on March 20 and 21 as the part of Karnataka assembly election campaign.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ