ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಇಂದು ಮಂಗಳೂರಿನಲ್ಲಿ ಬಿಡುಗಡೆ

|
Google Oneindia Kannada News

ಮಂಗಳೂರು, ಏಪ್ರಿಲ್ 27: ಮುಂಬರುವ ಚುನಾವಣೆಗೆ ಕಾಂಗ್ರೆಸ್ ಅತೀ ಜತನದಿಂದ ತಯಾರಿಸಿರುವ ಚುನಾವಣಾ ಪ್ರಣಾಳಿಕೆ ಇಂದು ಮಂಗಳೂರಿನಲ್ಲಿ ಬಿಡುಗಡೆಯಾಗಲಿದೆ.ಮಂಗಳೂರಿನ ಟಿ.ಎಂ.ಎ ಪೈ ಕನ್ವೆನ್ಷನ್ ಹಾಲ್ ನಲ್ಲಿ‌ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಪ್ರಣಾಳಿಕೆಯನ್ನು‌ ಬಿಡುಗಡೆ ಮಾಡಲಿದ್ದಾರೆ.

ಈ ಕುರಿತು ಗುರುವಾರ ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ನ ಚುನಾವಣಾ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಡಾ.ಎಂ. ವೀರಪ್ಪ ಮೊಯ್ಲಿ, "ಈವರೆಗೆ ರಾಜಕೀಯ ಇತಿಹಾಸದಲ್ಲಿ ಯಾವ ರಾಜಕೀಯ ಪಕ್ಷವೂ ಬಿಡುಗಡೆಗೊಳಿಸದ ರೀತಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದೇವೆ," ಎಂದು ಹೇಳಿದರು.

Rahul Gandhi to release election manifesto in Mangaluru - Veerappa Moily

ಪ್ರಣಾಳಿಕೆಗಾಗಿ 15 ಮಂದಿಯ ತಂಡ 4 ತಿಂಗಳು ಶ್ರಮ ವಹಿಸಿದ್ದು ರಾಜ್ಯದ ಸರ್ವ ಜನರ ಸರ್ವಾಂಗೀಣ ಅಭಿವೃದ್ಧಿ, ರಾಜ್ಯದ ಸಮಗ್ರ ಅಭಿವೃದ್ಧಿ, ಯುವಕರಿಗೆ ಉದ್ಯೋಗ , ಮಹಿಳೆಯರ ರಕ್ಷಣೆ, ಶಿಕ್ಷಣ, ಆರೋಗ್ಯ, ಪರಿಸರ ರಕ್ಷಣೆ, ಶುಚಿತ್ವ, ಮೂಲಭೂತ ಸೌಕರ್ಯ ಇನ್ನಿತರ ಅತ್ಯಂತ ಪ್ರಮುಖ ವಿಚಾರಗಳ ಬಗ್ಗೆ ಪ್ರಣಾಳಿಕೆಯಲ್ಲಿ ಪ್ರಾಮುಖ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಶುಕ್ರವಾರ ಮುಂಜಾನೆ ಮಂಗಳೂರಿಗೆ ಆಗಮಿಸುವ ರಾಹುಲ್ ಗಾಂಧಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿ ಬಂಟ್ವಾಳಕ್ಕೆ ತೆರಳಲಿದ್ದಾರೆ ಎಂದು ಹೇಳಿದ ಅವರು ಬಿಡುಗಡೆಗೊಳ್ಳುವ ಈ ಪ್ರಣಾಳಿಕೆ ಕುರಿತು ರಾಜ್ಯದ ನಾಲ್ಕು ಕಡೆ ಸಂವಾದ ಕೂಡ ನಡೆಯಲಿದೆ ಎಂದು ಮಾಹಿತಿ ನೀಡಿದರು.

English summary
Karnataka assembly elections 2018: Speaking to media persons in Mangaluru congress senior leader Dr.M. Veerappa Moily said that AICC president Rahul Gandhi will release congress manifesto in Mangaluru for next upcoming election . Congress has prepared people's manifesto for electon he added.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X