ಮಂಗಳೂರಲ್ಲಿ ಹಾಡಹಗಲೇ ರೌಡಿ ಶೀಟರ್ ಹತ್ಯೆ

Posted By:
Subscribe to Oneindia Kannada

ಮಂಗಳೂರು, ಆಗಸ್ಟ್ 19 : ರೌಡಿ ಶೀಟರ್ ಶರಣ್ ಚಿಕಿತ್ಸೆ ಫಲಕಾರಿಯಾಗದೆ ಎಜೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಆಟೋದಲ್ಲಿ ಹೋಗುವಾಗ ನಾಲ್ವರು ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಿದ್ದರು.

ಹಿಂದಿನ ಸುದ್ದಿ : ಮಂಗಳೂರಿನಲ್ಲಿ ಹಾಡಹಗಲೇ ರೌಡಿ ಶೀಟರ್ ಹತ್ಯೆ ಪ್ರಯತ್ನ ನಡೆದಿದೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರೀಶಿಲನೆ ನಡೆಸುತ್ತಿದ್ದಾರೆ.

ಮಂಗಳೂರಿನ ವಾಮಂಜೂರಿನಲ್ಲಿ ಶುಕ್ರವಾರ ಬೆಳಗ್ಗೆ ಮೂಡುಶೆಡ್ಡೆ ನಿವಾಸಿ ಶರಣ್ ಕೊಲೆ ಯತ್ನ ನಡೆದಿದೆ. ಬೊಲೆರೋ ವಾಹನದಲ್ಲಿ ಬಂದ ನಾಲ್ವರು ಶರಣ್ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ಹಲ್ಲೆ ಮಾಡಿ, ಪರಾರಿಯಾಗಿದ್ದಾರೆ.[ಅಪಹರಣದ ಕಥೆ ಹೆಣೆದ ಪತಿಯ ಹಂತಕಿ ಈಗ ಕಂಬಿಯ ಹಿಂದೆ]

Rowdy sheeter attacked in broad daylight, Mangaluru

ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಶರಣ್ ಇಂದು ಬೆಳಗ್ಗೆ ಪತ್ನಿ ಮತ್ತು ಮಕ್ಕಳ ಜೊತೆ ಆಟೋದಲ್ಲಿ ಹೋಗುವಾಗ ಅಡ್ಡಗಟ್ಟಿದ ನಾಲ್ವರು, ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದ ಪೈಕಿ ಇಬ್ಬರ ಗುರುತು ಪತ್ತೆಯಾಗಿದ್ದು ಇಮ್ರಾನ್ ಮತ್ತು ರಿಜ್ವಾನ್ ಎಂದು ಗುರುತಿಸಲಾಗಿದೆ.['ಭಾಸ್ಕರ್‌ ಶೆಟ್ಟಿ ಅವರ ಜೊತೆ ಯಾವುದೇ ವ್ಯವಹಾರ ಇರಲಿಲ್ಲ']

ಶರಣ್ ತಾಯಿಗೆ ಶಸ್ತ್ರ ಚಿಕಿತ್ಸೆ ನಡೆದಿದ್ದು ಅವರನ್ನು ನೋಡಲು ಹೆಂಡತಿ ಮಕ್ಕಳ ಜೊತೆ ಆತ ಆಸ್ಪತ್ರೆಗೆ ತೆರಳುತ್ತಿದ್ದ ಎಂದು ತಿಳಿದುಬಂದಿದೆ. ಶರಣ್ ಮೇಲೆ ಹಲ್ಲೆ ನಡೆದ ಬಳಿಕ ಅವರು ಪ್ರಯಾಣಿಸುತ್ತಿದ್ದ ಆಟೋದ ಚಾಲಕನೇ ಶರಣ್‌ನನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲು ಮಾಡಿದ್ದಾನೆ.

sharan

ವಾಮಂಜೂರು ರೋಹಿ ಕೊಲೆ ಆರೋಪಿಯಾಗಿದ್ದ ಶರಣ್, ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ. ವಿವಿಧ ಪ್ರಕರಣಕ್ಕೆ ಸಂಬಂಧಿಸಿದಂತೆ 2014ರಲ್ಲಿ ಕಾವೂರು ಪೊಲೀಸರು ಶರಣ್ ಬಂಧಿಸಿದ್ದರು. ಕೊಲೆ ಯತ್ನದ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A rowdy-sheeter was attacked in broad daylight at Moodushedde Mangaluru, on Friday August 19, 2016. Charan (31) a resident of Capitanio, was travelling by auto with his wife and child when four persons came in a bolero and attacked him.
Please Wait while comments are loading...