ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಹುಲ್ ಗಾಂಧಿ ಟೆಂಪಲ್ ರನ್ ವಿರುದ್ಧ ಸಾಧ್ವಿ ಬಾಲಿಕಾ ಸರಸ್ವತಿ ವಾಗ್ದಾಳಿ

By ಕಿರಣ್ ಸಿರ್ಸಿಕರ್‌
|
Google Oneindia Kannada News

ಮಂಗಳೂರು ಏಪ್ರಿಲ್ 27: ರಾಜ್ಯ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಪಕ್ಷದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಸಾಧ್ವಿ ಬಾಲಿಕಾ ಸರಸ್ವತಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ ದುಷ್ಟ ಶಕ್ತಿಗಳೊಂದಿಗೆ ರಾಷ್ಟ್ರೀಯ ಪಕ್ಷವೊಂದು ಚುನಾವಣೆಗೋಸ್ಕರ ಒಪ್ಪಂದ ಮಾಡಿಕೊಂಡಿರುವುದು ದುರದೃಷ್ಟಕರ ಈ ಬೆಳವಣಿಗೆ ಮುಂಬರುವ ದಿನಗಳಲ್ಲಿ ಹಿಂದೂಗಳ ಸ್ಥಿತಿ ಏನಾಗಲಿದೆ ಎಂಬುದನ್ನು ಸೂಚಿಸುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ರಾಹುಲ್ ಗಾಂಧಿಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ರಾಹುಲ್ ಗಾಂಧಿ

ಕೆಲವರಿಗೆ ಚುನಾವಣೆ ಹತ್ತಿರ ಬರುವಾಗಲೇ ಮಂದಿರ, ದೇವಾಲಯಗಳ ನೆನಪಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಸಾಧ್ವಿ ಬಾಲಿಕಾ ಸರಸ್ವತಿ ಚುನಾವಣೆ ಸಂದರ್ಭದಲ್ಲಿ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಹಿಂದೂಗಳ ನೆನಪಾಗುತ್ತದೆ. ತಮ್ಮ 'ಟೆಂಪಲ್ ರನ್' ಮುಂದುವರೆದರೆ ಅಯೋಧ್ಯೆಯಲ್ಲೂ ರಾಮಮಂದಿರವಿದೆ 'ಟೆಂಪಲ್ ರನ್' ಅಲ್ಲಿಗೂ ತಲುಪುವಂತಾಗಲಿ ಎಂದು ಅವರು ವ್ಯಂಗ್ಯವಾಡಿದರು.

Sadvi Balika Sarasvathi slams congress and Rahul Gandhi

ಮಾರಕಾಸ್ತ್ರಗಳಿಂದ ಗೋಶಾಲೆ ಹಾಗೂ ಮನೆಗಳ ಹಟ್ಟಿಯಿಂದ ಜನರನ್ನು ಬೆದರಿಸಿ ಗೋವುಗಳನ್ನು ಅಪಹರಿಸಿ ಕಸಾಯಿಖಾನೆಗೆ ಸಾಗಿಸುತ್ತಿರುವುದು ಆತಂಕಕಾರಿ ಪರಿಸ್ಥಿತಿ ಎಂದು ಅವರು ಹೇಳಿದರು. ದೇಶದಲ್ಲಿ ಗೋವುಗಳು ಹಾಗೂ ಮಹಿಳೆಯರು ಸುರಕ್ಷಿತರಿಲ್ಲ ಎಂದು ಅವರು ಕಿಡಿಕಾರಿದರು. ಲವ್ ಜಿಹಾದ್ ಭ್ರೂಣ ಹತ್ಯೆ ಸೇರಿದಂತೆ ಇನ್ನಿತರ ರೀತಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ , ದುಷ್ಕರ್ಮಗಳು ನಡೆಯುತ್ತಿದೆ ಇದನ್ನು ತಡೆಗಟ್ಟುವ ಜವಾಬ್ದಾರಿ ಸರ್ಕಾರಗಳ ಮೇಲಿದೆ ಎಂದು ಅವರು ಹೇಳಿದರು.

ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ದೇಶದಲ್ಲಿ ಗೋವುಗಳು ಸುರಕ್ಷಿತ ವಾಗಬೇಕಾದರೆ ಈ ಕೂಡಲೇ ದೇಶಾದ್ಯಂತ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದರು.

English summary
Sadvi Balika Sarasvathi visited Mangaluru. while talking to media, she slams congress to alliance with SDPI for upcoming assembly election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X