ಮಂಗಳೂರು ನಗರದಲ್ಲಿ ಮತ್ತೆ ನಿಷೇಧಾಜ್ಞೆಯ ಸದ್ದು

Posted By:
Subscribe to Oneindia Kannada

ಮಂಗಳೂರು, ಆಗಸ್ಟ್ 3: ಬಂಟ್ವಾಳ ಗಲಭೆಯಿಂದ ನಿರಂತರ ಎರಡು ತಿಂಗಳ ಕಾಲ ನಿಷೇಧಾಜ್ಞೆಯ ನೆರಳಲ್ಲೇ ಇದ್ದ ದಕ್ಷಿಣ ಕನ್ನಡದಲ್ಲಿ ಕೆಲವು ದಿನಗಳ ಹಿಂದಷ್ಟೇ ಸಿಆರ್'ಪಿಸಿ ಸೆಕ್ಷನ್ 144ನ್ನು ಹಿಂದಕ್ಕೆ ಪಡೆಯಲಾಗಿತ್ತು. ಇದೀಗ ಮತ್ತೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

ಮಂಗಳೂರು ನಗರದಲ್ಲಿ ಕಾನೂನು ಸಮಸ್ಯೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟು ಮಾಡುವಂತಹ ಅಹಿತಕರ ಘಟನೆಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ಈ ನಿಷೇಧಾಜ್ಞೆ ಹೇರಲಾಗಿದೆ.

Section to be continued till Aug 7th in city limits of Mangaluru Commisionerate

ಆಗಸ್ಟ್ 7 ರಂದು ಮಧ್ಯಾಹ್ನ 12 ಗಂಟೆವರೆಗೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಇರಲಿದೆ ಎಂದು ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ತಮ್ಮ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಈ ನಿಷೇಧಾಜ್ಞೆಯು ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Section 144 imposed in Mangaluru city limits till August 7th. An section order is issued by the Police commissioner of Mangaluru T R Suresh.
Please Wait while comments are loading...