ದಕ್ಷಿಣ ಕನ್ನಡದಲ್ಲಿ ಸೆ.2ರಂದು ಶಾಲಾ-ಕಾಲೇಜು ಬಂದ್

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಮಂಗಳೂರು, ಆಗಸ್ಟ್ 24 : ದಕ್ಷಿಣ ಕನ್ನಡ ಜಿಲ್ಲೆಯ ನಾನಾ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಸೆಪ್ಟೆಂಬರ್ 2ರಂದು ಎಸ್‌ಎಫ್‌ಐ ಜಿಲ್ಲಾ ಶಾಲಾ ಕಾಲೇಜುಗಳ ಬಂದ್‌ಗೆ ಕರೆ ನೀಡಿದೆ.

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ನಿತಿನ್ ಕುತ್ತಾರ್ ಈ ಕುರಿತು ಮಾಹಿತಿ ನೀಡಿದರು. 'ಜಿಲ್ಲೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಮುಂದುವರಿದಿದ್ದರೂ ಅನೇಕ ಶೈಕ್ಷಣಿಕ ಸಮಸ್ಯೆಗಳ ಆಗರವಾಗಿದ್ದು, ರಾಜಕೀಯ ಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಅವುಗಳ ಪರಿಹಾರ ಸಾಧ್ಯವಾಗುತ್ತಿಲ್ಲ' ಎಂದು ದೂರಿದರು.[ಕೊಡಗಿನಲ್ಲೂ ತಮಿಳು, ಮಲಯಾಳಂ ಶಾಲೆ ಇದೆ ಕಣ್ರೀ]

SFI calls for bandh of schools, colleges on September 2, 2016

'ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿಯಿಂದಾಗಿ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಸೊರಗಿ ಹೋಗಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಂದ ಡೊನೇಷನ್ ಸುಲಿಗೆ ಮಾಡುತ್ತಿವೆ. ಈ ಪಿಡುಗು ನಿಯಂತ್ರಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ' ಎಂದು ಆರೋಪಿಸಿದರು.[ಮಣಿಪಾಲ ವಿದ್ಯಾರ್ಥಿಯ ಕಿರುಚಿತ್ರಕ್ಕೆ ರಾಷ್ಟ್ರಪ್ರಶಸ್ತಿ]

'ಜಿಲ್ಲೆಯ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಸೆಪ್ಟೆಂಬರ್ 2 ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಬಂದ್ ಆಚರಿಸಲಾಗುವುದು' ನಿತಿನ್ ಕುತ್ತಾರ್ ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Students Federation of India (SFI) has called for a Dakshina Kannada bandh of schools and colleges on September 2, 2016.
Please Wait while comments are loading...