ಶೃಂಗೇರಿ ವಿದ್ಯಾರ್ಥಿ ಆತ್ಮಹತ್ಯೆ: ಮಂಗ್ಳೂರಲ್ಲಿ ಎಬಿವಿಪಿ ಬೃಹತ್ ಪ್ರತಿಭಟನೆ

Posted By: Ramesh
Subscribe to Oneindia Kannada

ಮಂಗಳೂರು, ಜನವರಿ. 11 : ಶೃಂಗೇರಿಯಲ್ಲಿ ಎಬಿವಿಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣವನ್ನು ಖಂಡಿಸಿ ಮಂಗಳೂರಲ್ಲಿ ಎಬಿವಿಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು.

ತನ್ನ ಮೇಲೆ ಪ್ರಕರಣ ದಾಖಲಾಗಿದ್ದಕ್ಕೆ ಮನನೊಂದು ಅಭಿಷೇಕ್ ಎಂಬ ಎಬಿವಿಪಿ ಕಾರ್ಯಕರ್ತ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ. ಇದನ್ನು ಖಂಡಿಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬೆಸೆಂಟ್ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟಿಸಿದರು.

ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು. ಈ ವೇಳೆ ಸ್ಠಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಈ ಮಧ್ಯೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಸಮರ ನಡೆಯಿತು. ಸ್ಥಳಕ್ಕೆ ದೌಡಾಯಿಸಿದ ಬರ್ಕೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು. ಹತ್ತು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

shringeri student suicide case: Mangaluru abvp protest

ಹುತಾತ್ಮ ಯೋಧರಿಗೆ ನಮನ ಕಾರ್ಯಕ್ರಮಕ್ಕೆ ಸಂಬಂಧಿಸಿ ಉಂಟಾಗಿದ್ದ ಗಲಾಟೆಯಿಂದ ಬೇಸತ್ತು ಎಬಿವಿಪಿ ಕಾರ್ಯಕರ್ತ, ಜೆಸಿಬಿಎಂ ಕಾಲೇಜಿನ ಬಿಕಾಂ ವಿದ್ಯಾರ್ಥಿ ಅಭಿಷೇಕ್(21) ಆತ್ಮಹತ್ಯೆ ಮಾಡಿಕೊಂಡಿದ್ದ.

ಜನವರಿ 7ರಂದು ಶೃಂಗೇರಿಯಲ್ಲಿ ಹುತಾತ್ಮ ಯೋಧರಿಗೆ ನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದಕ್ಕೆ ಅಂಕಣಕಾರ ಚಕ್ರವರ್ತಿ ಸೂಲಿಬೆಲೆಯನ್ನು ಆಹ್ವಾನಿಸಲಾಗಿತ್ತು.

shringeri student suicide case: Mangaluru abvp protest

ಆದರೆ, ಸೂಲೆಬೆಲೆ ಬರುವುದನ್ನು ವಿರೋಧಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಜ.7ರಂದು ಪತ್ರಿಕಾಗೋಷ್ಠಿ ಕರೆದಿದ್ದರು. ಈ ವಿಚಾರವಾಗಿ ಎಬಿವಿಪಿ ಮತ್ತು ಎನ್‌ಎಸ್‌ಯುಐ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು.

ಗಲಾಟೆಗೆ ಸಂಬಂಧಿಸಿ ಅಭಿಷೇಕ್ ಸೇರಿದಂತೆ ನಾಲ್ವರು ಎಬಿವಿಪಿ ಕಾರ್ಯಕರ್ತರ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ವಿಚಾರದಲ್ಲಿ ನೊಂದ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
shringeri student suicide case- abvp protest at Mangaluru besent circle blocked by garment abvp workers on January 11 .
Please Wait while comments are loading...