2016ನೇ ಕೊಂಕಣಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಟ್ಟಿ ಪ್ರಕಟ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಜನವರಿ. 18 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2016ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪುರಸ್ಕೃತರ ಪಟ್ಟಿಯನ್ನು ಬುಧವಾರ ಪ್ರಕಟಿಸಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2016ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪುರಸ್ಕೃತರ ಪಟ್ಟಿಯನ್ನು ಅಕಾಡಮಿಯ ಅಧ್ಯಕ್ಷ ರಾಯ್ ಕ್ಯಾಸ್ಟಲಿನೊ ಬಿಡುಗಡೆಗೊಳಿಸಿದರು.

ಈ ಗೌರವ ಪ್ರಶಸ್ತಿಗೆ ಮಂಗಳೂರಿನ ಸಿರಿಲ್ ಜಿ. ಸಿಕ್ವೇರಾ (ಸಾಹಿತ್ಯ), ಶಿರಸಿಯ ವಾಸುದೇವ ಬಾಲಕೃಷ್ಣ ಶಾನಭಾಗ್ (ಕಲೆ), ಯಲ್ಲಾಪುರದ ಕ್ಲಾರಾ ಅಂತೋನ್ ಸಿದ್ದಿ (ಜಾನಪದ) ಆಯ್ಕೆಯಾಗಿದ್ದಾರೆ.

Six Persons selected for Karnataka Konkani Sahitya Academy Award 2016

ಪುಸ್ತಕ ಬಹುಮಾನಕ್ಕೆ ಕಾಸರಗೋಡು ಚಿನ್ನಾ (ಭಾಷಾಂತರ ವಿಭಾಗ- ತೀಸ್ ಕಾಣಿಯೊ), ಉಮೇಶ್ ನಾಯಕ್ ಕೆ. (ಕವನ ವಿಭಾಗ- ಶ್ರೀನಿವಾಸ ಕಲ್ಯಾಣ), ಆಗ್ನೇಸಿಯಾ ಫ್ರೇಂಕ್ ಬಿ.ಎಸ್. (ಅಧ್ಯಯನ ವಿಭಾಗ- ಅಮೃತ್ ತುಜ್ಯಾ ಹಾತಿಂ) ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಫೆ.12ರಂದು ಸಂಜೆ 6 ಗಂಟೆಗೆ ನಗರದ ಪುರಭವನದಲ್ಲಿ ನಡೆಯಲಿದ್ದು, ಮುಖ್ಯಯಂತ್ರಿ ಸಿದ್ದರಾಮಯ್ಯ ಗೌರವ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ಸಚಿವೆ ಉಮಾಶ್ರೀ ಪುಸ್ತಕ ಪುರಸ್ಕಾರವನ್ನೂ ಪ್ರಧಾನ ಮಾಡಲಿದ್ದಾರೆ. ಗೌರವ ಪ್ರಶಸ್ತಿಗೆ ತಲಾ 50 ಸಾವಿರ ರೂ. ಮತ್ತು ಪುಸ್ತಕ ಬಹುಮಾನಕ್ಕೆ ತಲಾ 25 ಸಾವಿರ ರೂ.ವನ್ನು ನೀಡಲಾಗುತ್ತದೆ.

ಮಂಗಳೂರು ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ, ನಾಗಲ್ಯಾಂಡ್ ಮತ್ತು ತ್ರಿಪುರಾ ರಾಜ್ಯಪಾಲ ಪಿ.ಬಿ. ಆಚಾರ್ಯ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ ಕಾಮತ್ ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka Konkani Sahitya Academy has announced its annual awards for the year 2016. The awards have been announced in three categories, Honorary Awards, Book Award and Yuva Puraskar which will be conferred during the three-day Konkani Lokotsav from February 10 to 12 at Town Hall.
Please Wait while comments are loading...