ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿಗೆ ಬರಲಿದೆ ವಿಶ್ವದರ್ಜೆ ಕೌಶಲ್ಯ ಅಭಿವೃದ್ಧಿ ಕೇಂದ್ರ

By ಐಸಾಕ್ ರಿಚರ್ಡ್, ಮಂಗಳೂರು
|
Google Oneindia Kannada News

ಮಂಗಳೂರು, ಏ. 6 : ದಕ್ಷಿಣ ಕನ್ನಡ ಜಿಲ್ಲೆಯ ಯುವಜನರು ಉದ್ಯೋಗಕ್ಕಾಗಿ ಮುಂಬೈ, ಕೊಲ್ಲಿ ರಾಷ್ಟ್ರಗಳಿಗೆ ತೆರಳುತ್ತಿದ್ದು, ಅವರಿಗೆ ಹೆಚ್ಚಿನ ಕೌಶಲ್ಯ ಲಭಿಸದರೆ ಉತ್ತಮ ಕೆಲಸ ಹಾಗೂ ಹೆಚ್ಚಿನ ವೇತನ ಸಿಗಲು ಸಾಧ್ಯವಿದೆ. ಆದ್ದರಿಂದ ಮಂಗಳೂರಿನಲ್ಲಿ ವಿಶ್ವದರ್ಜೆಯ ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಭಾನುವಾರ ಮಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ರಾಜ್ಯ ಸಚಿವ ಧರ್ಮೇಂದ್ರ ಪ್ರಧಾನ್, ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಕೌಶಲ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು. [ಯೆಮನ್ ನಿಂದ ಪಾರಾಗಿ ಬಂದ ಕುಡ್ಲದ ಕುವರ]

Dharmendra Pradhan

ಉದ್ಯಮ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ರಂಗಗಳಲ್ಲಿ ಮುಂಚೂಣಿಯಲ್ಲಿರುವ ಮಂಗಳೂರಿನಲ್ಲಿ ವಿಶ್ವದರ್ಜೆಯ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುವುದು ಎಂದರು. ಮಂಗಳೂರಿನಲ್ಲಿ ಎಂಆರ್‌ಪಿಎಲ್, ಒಎಂಪಿಎಲ್, ಐಎಸ್‌ಪಿಆರ್‌ಎಲ್, ವಿಶೇಷ ವಿತ್ತ ವಲಯವಿದೆ. ಆದ್ದರಿಂದ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಪೂರಕ ವಾತಾವರಣವಿದೆ ಎಂದರು. [ಎಂಆರ್ ಪಿಎಲ್ ಮುಂದೆ ಶವವಾದ ಗ್ರಾಮಸ್ಥರು]

ದಕ್ಷಿಣ ಕನ್ನಡದ ಯುವಜನರು ಮುಂಬೈ ಮತ್ತು ಕೊಲ್ಲಿ ರಾಷ್ಟ್ರಗಳಿಗೆ ಉದ್ಯೋಗಕ್ಕಾಗಿ ಹೋಗುತ್ತಿದ್ದಾರೆ. ಅವರಿಗೆ ಜಿಲ್ಲೆಯಲ್ಲಿಯೇ ಉತ್ತಮ ಕೆಲಸ ಮತ್ತು ವೇತನ ಲಭಿಸಲು ಕೌಶಲ್ಯ ಅಭಿವೃದ್ಧಿ ಕೇಂದ್ರ ಸಹಾಯಕವಾಗಲಿದೆ. ಎನ್‌ಎಂಪಿಟಿ, ಕುದುರೆಮುಖ ಸಹಿತ ಹಲವಾರು ಉದ್ಯಮಗಳಲ್ಲೇ ಅವರು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಪರಿಸರಕ್ಕೆ ಹಾನಿಯಾಗುತ್ತಿದೆ : ಮಂಗಳೂರು ತೈಲಾಗಾರದ ಮೂರನೇ ಹಂತದ ಕೋಕ್ ಸಲ್ಫರ್ ಘಟಕದಿಂದ ಸ್ಥಳೀಯ ಪರಿಸರಕ್ಕೆ ಹಾನಿ ಉಂಟಾಗುತ್ತಿದೆ. ಈ ಬಗ್ಗೆ ಎಂಆರ್ ಪಿಎಲ್ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ, ಸ್ಥಳೀಯರನ್ನು ಭೇಟಿ ಮಾಡಿ ವಸ್ತುಸ್ಥಿತಿ ಅರಿತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದರು.

English summary
Union Minister of State for Petroleum and Natural Gas Dharmendra Pradhan said, 'world class skill development center' will be set up in the Mangaluru city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X