ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾವ್ಯ ಆತ್ಮಹತ್ಯೆ: ಮರಣೋತ್ತರ ಪರೀಕ್ಷೆ ವರದಿ ಪರಿಶೀಲನೆ

|
Google Oneindia Kannada News

ಮಂಗಳೂರು, ಜುಲೈ 31 : ರಾಜ್ಯಾದ್ಯಂತ ಸುದ್ದಿಯಾಗಿರುವ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯ ಪೂಜಾರಿ ಅವರ ಆತ್ಮಹತ್ಯೆ ಮರಣೋತ್ತರ ಪರೀಕ್ಷೆಯ ವರದಿ ಇದೀಗ ಪೊಲೀಸರ ಕೈ ಸೇರಿದೆ.

ವರದಿಯಲ್ಲಿ ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಿರಿಯ ಅಧಿಕಾರಿಗಳೊಂದಿಗೆ ವರದಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Special Investigation Team Receives Post-mortem report of kavya suicide case

ಈ ಸಾವಿನ ಬಗ್ಗೆ ಕಾವ್ಯಾ ಅವರ ಹೆತ್ತವರು ಸೇರಿದಂತೆ ಸಾಮಾಜಿಕ ವಲಯದಲ್ಲಿ ವ್ಯಾಪಕ ಶಂಕೆ ವ್ಯಕ್ತವಾಗಿದ್ದು, ಸಮಗ್ರ ತನಿಖೆ ಒಕ್ಕೊರಳ ಆಗ್ರಹ ಕೇಳಿಬಂದಿದೆ.

ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ನಿಗೂಢ ಸಾವು ಪ್ರಕರಣದ ತನಿಖೆ ಚುರುಕುಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ನಿಗೂಢ ಸಾವು ಪ್ರಕರಣದ ತನಿಖೆ ಚುರುಕು

ಈ ಹಿನ್ನೆಲೆಯಲ್ಲಿ ಈಗಾಗಲೇ ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ತನಿಖೆಗೆ ಆದೇಶಿಸಿದ್ದು, ಎಸಿಪಿ ರಾಜೇಂದ್ರ ಡಿ.ಎಸ್. ನೇತೃತ್ವದಲ್ಲಿ ತಂಡ ತನಿಖೆ ನಡೆಸುತ್ತಿದೆ.

ಭಾನುವಾರ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಸಹಿತ ಆರು ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ವಿಚಾರಣೆ ಮಾಡಿದರು.

ಕಟೀಲು ಸಮೀಪದ ಎಕ್ಕಾರು ದೇವಗುಡ್ಡೆ ನಿವಾಸಿ ಲೋಕೇಶ್ ಪೂಜಾರಿ ಎಂಬವರ ಪುತ್ರಿ ಕಾವ್ಯ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಜುಲೈ 20ರ ರಾತ್ರಿ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಸೇರಿದ ಹಾಸ್ಟೆಲ್ ನಲ್ಲಿ ಕಾವ್ಯಾಮೃತದೇಹ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

English summary
The special investigation team has received the post-mortem report of National-level Badminton player Kavya Poojary of alvas school who was found hanged on July 20.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X