ಮಂಗಳೂರು : ರಸ್ತೆ ಅಪಘಾತ, ಉಪನ್ಯಾಸಕಿ ಬಲಿ

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಮಂಗಳೂರು, ಮಾರ್ಚ್ 23 : ಮಂಗಳೂರು ನಗರದಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾಲೇಜು ಉಪನ್ಯಾಸಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತಪಟ್ಟವರನ್ನು ಸಂತ ಆಗ್ನೇಸ್ಯಾ ಕಾಲೇಜಿನ ಉಪನ್ಯಾಸಕಿ ಜಾಯ್ಲಿನ್ ಮೋನಿಸ್ (24) ಎಂದು ಗುರುತಿಸಲಾಗಿದೆ. ನಗರದ ನಂತೂರು ಬಳಿ ಬೆಳಗ್ಗೆ ನಡೆದ ಅಪಘಾತದಲ್ಲಿ ಮೋನಿಸ್ ಮೃತಪಟ್ಟಿದ್ದಾರೆ. [ಅಪಘಾತವಾದಾಗ ಜೀವ ಉಳಿಸಲು ನೆರವಾಗಿ]

road accident

ಮೋನಿಸ್ ಅವರು ತನ್ನ ತಂಗಿಯೊಂದಿಗೆ ದ್ವಿಚಕ್ರವಾಹನದಲ್ಲಿ ಕಾಲೇಜಿಗೆ ಹೋಗುತ್ತಿದ್ದರು. ತಂಗಿ ಬೈಕ್ ಓಡಿಸುತ್ತಿದ್ದರು. ಕಾಂಕ್ರಿಟ್ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಏಕಮುಖ ರಸ್ತೆ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. [ದೇಹ ತುಂಡಾದರೂ ಕಣ್ಣು ದಾನ ಮಾಡಿ ಬೆಳಕಾದರು]

ರಸ್ತೆಯಲ್ಲಿದ್ದ ಹೊಂಡವೊಂದರ ಬಳಿ ಬೈಕ್ ನಿಯಂತ್ರಣ ಕಳೆದುಕೊಂಡಿದ್ದು, ಮೋನಿಸ್ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ಸಮಯದಲ್ಲಿ ಹಿಂದಿನಿಂದ ಬಂದ ನಗರ ಸಾರಿಗೆ ಬಸ್ ಅವರ ತಲೆ ಮೇಲೆ ಹತ್ತಿದ್ದು, ಸ್ಥಳದಲ್ಲಿಯೇ ಅವರು ಮೃತಪಟ್ಟಿದ್ದಾರೆ.

ಅಪಘಾತದಿಂದಾಗಿ ರೊಚ್ಚಿಗೆದ್ದ ಸಾರ್ವಜನಿಕರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು. ಕದ್ರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
24-year-old Joyline Monis killed in road accident at Nanthoor, Mangaluru city on Wednesday March 23, 2016 morning. Joyline Monis lecturer in commerce at St Agnes College.
Please Wait while comments are loading...