ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಿಂದೂ ಸಂಘಟನೆಗಳ ಬೆದರಿಕೆ, ಹೊಸ ವರ್ಷಕ್ಕೆ ಮಂಗಳೂರಿನಲ್ಲಿ ಬಿಗಿ ಭದ್ರತೆ

|
Google Oneindia Kannada News

ಮಂಗಳೂರು, ಡಿಸೆಂಬರ್ 31: ಹೊಸ ವರ್ಷ 2018ನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ಮಂಗಳೂರಿನ ಎಲ್ಲೆಡೆ ಸಿದ್ದತೆ ಜೋರಾಗಿ ಸಾಗಿದೆ. ಇಂದು ನಗರದಾದ್ಯಂತ ಔತಣಕೂಟ, ಸಭೆ, ಸಮಾರಂಭ, ಮನೋರಂಜನಾ ಕಾರ್ಯಕ್ರಮ ಸೇರಿದಂತೆ ಯುವ ಮನಸ್ಸುಗಳು ಪಾರ್ಟಿಮೂಡ್ ನಲ್ಲಿ ತೇಲಲು ಭರದ ಸಿದ್ಧತೆ ನಡೆದಿದೆ.

ಈ ನಡುವೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಹೊಸ ವರ್ಷಾಚರಣೆ ಸಂದರ್ಭ ಡಿಜೆ ಪಾರ್ಟಿಗಳಿಗೆ ಅವಕಾಶ ನೀಡಬಾರದೆಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಎಚ್ಚರಿಕೆ ನೀಡಿವೆ. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Stringent police security during New Year celebrations in Mangaluru

ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಸಭ್ಯತೆಯ ಪರಿಧಿಯಲ್ಲಿ ಪಾರ್ಟಿ ಮಾಡುವಂತೆ ಪೊಲೀಸರು ಸೂಚಿಸಿದ್ದು ಕಾನೂನು ಸುವ್ಯವಸ್ಥೆಗೆ ಭಂಗ ತರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆ.

ಇಂದು ರಾತ್ರಿ ನಗರದಾದ್ಯಂತ ಹೊಸ ವರ್ಷಾಚರಣೆಯ ಕಾರ್ಯಕ್ರಮ ಗಳನ್ನು ಆಯೋಜಿಸಲಾಗಿದ್ದು ಈ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಪೊಲೀಸ್ ಕಮೀಷನರೇಟ್ ನಲ್ಲಿ 5 ಕೆ.ಎಸ್.ಆರ್.ಪಿ, 15 ಸಿಎಆರ್, 650 ಪೊಲೀಸ್ ಸಿಬ್ಬಂದಿ ಹಾಗೂ 120 ಗೃಹರಕ್ಷಕ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಹೊಸ ವರ್ಷ ಆಚರಣೆಯ ಹೆಸರಿನಲ್ಲಿ ಡಿಸೆಂಬರ್ 31 ರಂದು ನಡೆಯುವ ಡಿಜೆ ಪಾರ್ಟಿ, ಅಶ್ಲೀಲ ನೃತ್ಯಗಳಂತಹ ಕಾರ್ಯಕ್ರಮಕ್ಕೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ವಿರೋಧ ವ್ಯಕ್ತಪಡಿಸಿದ್ದು ಈ ಕಾರ್ಯಕ್ರಮಗಳಿಗೆ ಅವಕಾಶ ನೀಡದಂತೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿತ್ತು.

English summary
To avoid untoward incidents during New Year celebrations , police is set to strengthen security arrangements in Mangalore city . A total of 650 police personnel have been deployed in the city in view of New Year celebrations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X