ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು : ಮತ್ತೆ ನೈತಿಕ ಪೊಲೀಸ್ ಗಿರಿ, ವಿದ್ಯಾರ್ಥಿಗಳ ಮೇಲೆ ಹಲ್ಲೆ

|
Google Oneindia Kannada News

ಮಂಗಳೂರು, ಮಾರ್ಚ್ 25 : ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಬೀಚ್‌ನಲ್ಲಿ ಹುಟ್ಟುಹಬ್ಬದ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳ ತಂಡದ ಮೇಲೆ ಹಲ್ಲೆ ನಡೆದಿದೆ.

ಮಂಗಳೂರು ಹೊರವಲಯದ ತಣ್ಣೀರುಬಾವಿ ಬೀಚ್ ಬಳಿ ಈ ಘಟನೆ ನಡೆದಿದೆ.

ಶನಿವಾರ ತಣ್ಣೀರುಬಾವಿ ಬೀಚ್ ಬಳಿ ಬರ್ತ್ ಡೇ ಆಚರಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಯುವಕರ ತಂಡ ಹಲ್ಲೆ ನಡೆಸಿದೆ.

Students assaulted by group of youth in Thannirubavi beach

ತಣ್ಣೀರುಬಾವಿಯ ಫಾತಿಮಾ ಚರ್ಚ್ ಬಳಿ ಈ ಘಟನೆ ನಡೆದಿದೆ. ಇಬ್ಬರು ವಿದ್ಯಾರ್ಥಿನಿಯರ ಜೊತೆಗಿದ್ದ ಸಾಬಿತ್, ಸಮೀರ್ ಮತ್ತು ನಿತೇಶ್ ಎಂಬ ಮೂವರು ಹುಡುಗರ ಮೇಲೆ ಹಲ್ಲೆ ನಡೆಸಲಾಗಿದೆ.

ಹುಟ್ಟುಹಬ್ಬದ ಸಂಭ್ರಮಾಚಾರಣೆಯಲ್ಲಿ ತೊಡಗಿದ್ದ ವಿದ್ಯಾರ್ಥಿಗಳು ತಮ್ಮೊಂದಿಗಿದ್ದ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದರು ಎಂದು ದೂರಲಾಗಿದೆ. ಈ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಯುವಕರ ತಂಡವೊಂದು ವಿದ್ಯಾರ್ಥಿಗಳ ಹೆಸರು ಕೇಳಿದ ಮೇಲೆ, ಹಲ್ಲೆ ನಡೆಸಿದೆ.

Students assaulted by group of youth in Thannirubavi beach

ಬಳಿಕ ವಿದ್ಯಾರ್ಥಿನಿಯರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರೆಂಬುದನ್ನು ತಿಳಿದ ಬಳಿಕ ಯುವಕರ ತಂಡ ಅಲ್ಲಿಂದ ಪರಾರಿಯಾಗಿದೆ. ಹಲ್ಲೆಗೊಳಗಾದ ಯುವಕರಿಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Students of Mangalurus reputed college assaulted by group of youth in Tanniru bavi beach. A case registered at Panambur police station regarding the incident at Thanirbhavi .
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X