ಯುವತಿ ಅಶ್ಲೀಲ ಚಿತ್ರ ಫೇಸ್‌ಬುಕ್‌ಗೆ ಹಾಕಿದವನಿಗೆ 1 ವರ್ಷ ಜೈಲು

Posted By:
Subscribe to Oneindia Kannada

ಮಂಗಳೂರು, ಅ.12 : ಯುವತಿ ಮೇಲೆ ಅತ್ಯಾಚಾರ ನಡೆಸಿ, ಅದರ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಾಕಿದ್ದ ಆರೋಪಿಗೆ ಮಂಗಳೂರು ನ್ಯಾಯಾಲಯ ಒಂದು ವರ್ಷದ ಕಠಿಣ ಶಿಕ್ಷೆ ಮತ್ತು ಇಪ್ಪತ್ತೈದು ಸಾವಿರ ರೂ. ದಂಡ ವಿಧಿಸಿದೆ.

ಸುಳ್ಯದ ಮೊರಂಗಲ್ಲುವಿನ ನಿವಾಸಿ ಕುಸುಮಾಧರ್ (30) ಗೆ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ. ಯುವತಿಯನ್ನು ಪ್ರೀತಿಸುತ್ತೇನೆ ಎಂದು ನಾಟಕವಾಡಿದ್ದ ಕುಸುಮಾಧರ್, ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ.

Sullia man convicted of posting intimate photos of woman on social media

ಅತ್ಯಾಚಾರದ ವಿಡಿಯೋ ಮಾಡಿ ಅದನ್ನು ಯುವತಿಗೆ ತೋರಿಸಿ 5 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿದ್ದ. ಯುವತಿ ಒಪ್ಪದಿದ್ದಾಗ ನಕಲಿ ಫೇಸ್ ಬುಕ್ ಖಾತೆ ತೆರೆದು ವಿಡಿಯೋವನ್ನು ಅಪ್‌ಲೋಡ್ ಮಾಡಿದ್ದ. 2013ರ ಏಪ್ರಿಲ್ 14ರಂದು ಕುಸುಮಾಧರ್ ಅತ್ಯಾಚಾರ ನಡೆಸಿದ ಬಗ್ಗೆ ದೂರು ದಾಖಲು ಮಾಡಲಾಗಿತ್ತು.

ದೂರಿನ ಅನ್ವಯ ತನಿಖೆ ನಡೆಸಿದ ಸುಬ್ರಮಣ್ಯ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Mangaluru 6th additional district and sessions court sentenced 1 year imprisonment for Kusumadhara (37) from Sullia for posting intimate photos, Videos of a woman on a social media.
Please Wait while comments are loading...