ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಪೊಲೀಸ್ ಭದ್ರತೆಯಲ್ಲಿ ಕಾಲಾ ಚಿತ್ರ ಪ್ರದರ್ಶನ ಅರಂಭ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜೂನ್ 07: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲಾ ಚಿತ್ರ ಬಿಡುಗಡೆಗೆ ರಾಜ್ಯದಾದ್ಯಂತ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿವೆ. ಕಾಲಾ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಪಡಿಸಿರುವ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಬೆಂಗಳೂರು ಸೇರಿದಂತೆ ಇತರೆಡೆ ಪೊಲೀಸರು ಬಂಧಿಸಿದ್ದಾರೆ.

ಆದರೆ ಮಂಗಳೂರಿನಲ್ಲಿ ಕಾಲಾ ಚಿತ್ರ ವಿವಾದ ಸದ್ದುಮಾಡಿಲ್ಲ. ಚಿತ್ರ ಪ್ರದರ್ಶನಕ್ಕೆ ಯಾವುದೇ ರೀತಿಯಲ್ಲಿ ವಿರೋಧ ವ್ಯಕ್ತವಾಗಿಲ್ಲ.

'ಕಾಲಾ' ಚಿತ್ರಕ್ಕೆ ಬೆಂಗಳೂರಲ್ಲಿ ಹಿನ್ನಡೆ, ಮಾಲ್‌ಗಳಲ್ಲಿ ಪ್ರದರ್ಶನ ಸಾಧ್ಯತೆ'ಕಾಲಾ' ಚಿತ್ರಕ್ಕೆ ಬೆಂಗಳೂರಲ್ಲಿ ಹಿನ್ನಡೆ, ಮಾಲ್‌ಗಳಲ್ಲಿ ಪ್ರದರ್ಶನ ಸಾಧ್ಯತೆ

ಮಂಗಳೂರಿನ‌ ಮಲ್ಟಿಫ್ಲೆಕ್ ಗಳಲ್ಲಿ ಕಾಲಾ ಚಿತ್ರ ಬಿಡುಗಡೆಗೊಂಡಿದ್ದು, ಪ್ರದರ್ಶನ ಆರಂಭಗೊಂಡಿದೆ. ಮಂಗಳೂರಿನ ಭಾರತ್ ಮಾಲ್ ನಲ್ಲಿರುವ ಬಿಗ್ ಸಿನೆಮಾ, ಸಿಟಿ ಸೆಂಟರ್ ಮಾಲ್ ನಲ್ಲಿರುವ ಸಿನಿಪೊಲಿಸ್ ಹಾಗು ಫೋರಂ ಮಾಲ್ ನಲ್ಲಿರುವ ಪಿವಿಆರ್ ಮಲ್ಟಿಫ್ಲೆಕ್ಸ್ ಗಳಲ್ಲಿ ಪೊಲೀಸ್ ಭದ್ರತೆಯಲ್ಲಿ ಚಿತ್ರ ಪ್ರದರ್ಶನ ಆರಂಭಗೊಂಡಿದೆ.

Kaala Controversy

ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುವ ಆತಂಕದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಇಲಾಖೆ ಮಾಲ್ ಹಾಗು ಮಲ್ಟಿಫ್ಲೆಕ್ಸ್ ಚಿತ್ರಮಂದಿರದ ಹೊರಗಡೆ ಪೊಲೀಸ್ ಭದ್ರತೆ ಒದಗಿಸಿದ್ದು ಯಾವುದೇ ಅಡ್ಡಿ ಆತಂಕಗಳಿಲ್ಲದೇ ಕಾಲಾ ಚಿತ್ರ ಮಂಗಳೂರಿನ ಮಲ್ಟಿಫೆಕ್ಸ್ ಗಳಲ್ಲಿ ಪ್ರದರ್ಶನ ಗೊಳ್ಳುತ್ತಿವೆ.

'ಕಾಲಾ' ಪ್ರದರ್ಶನ ರದ್ದುಗೊಳಿಸಿ ಹಣ ವಾಪಸ್ಸು ಮಾಡಿದ ಥಿಯೇಟರ್ ಮಾಲೀಕ'ಕಾಲಾ' ಪ್ರದರ್ಶನ ರದ್ದುಗೊಳಿಸಿ ಹಣ ವಾಪಸ್ಸು ಮಾಡಿದ ಥಿಯೇಟರ್ ಮಾಲೀಕ

Kaala Controversy

ಸರಿಸುಮಾರು 12:30 ಗೆ ಕಾಲಾ ಚಿತ್ರದ ಮೊದಲ ಪ್ರದರ್ಶನ ಆರಂಭಗೊಂಡಿದೆ. ಕಾಲಾ ಚಿತ್ರ ಪ್ರದರ್ಶನಕ್ಕೆ ಮಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿಲ್ಲ.

English summary
Kaala Controversy : Superstar Ranijikanth's Movie Kaala released in Mangaluru. Movie released under police protection.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X