ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಲ್ಲಿ ಪ್ರತಿವರ್ಷ ಸರ್ಫಿಂಗ್ ಸ್ಪರ್ಧೆ ಆಯೋಜನೆ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಮೇ 31 : ಮಂಗಳೂರಿನಲ್ಲಿ ಮೂರು ದಿನಗಳ ಕಾಲ ನಡೆದ ಮೊಟ್ಟಮೊದಲ 'ರಾಷ್ಟ್ರೀಯ ಸರ್ಫಿಂಗ್ ಸ್ಪರ್ಧೆ' ಯಶಸ್ವಿಯಾಗಿದೆ. ಮುಂದಿನ ವರ್ಷದಿಂದ ನಗರದಲ್ಲಿ ಪ್ರತಿ ವರ್ಷ ಸರ್ಫಿಂಗ್ ಸ್ಪರ್ಧೆ ಆಯೋಜಿಸಲು ನಿರ್ಧರಿಸಲಾಗದೆ.

ಮೇ 27ರಿಂದ ಮೂರು ದಿನಗಳ ಕಾಲ ಸಸಿಹಿತ್ಲು ಬೀಚ್‌ನಲ್ಲಿ ನಡೆದ ರಾಷ್ಟ್ರೀಯ ಸರ್ಫಿಂಗ್ ಸ್ಪರ್ಧೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಬೀಚ್‌ ಅನ್ನು ಅಭಿವೃದ್ಧಿಪಡಿಸಿ ಪ್ರತಿ ವರ್ಷ ಸರ್ಫಿಂಗ್ ಸ್ಪರ್ಧೆ ನಡೆಸಲು ಚಿಂತನೆ ನಡೆಸಲಾಗಿದೆ. 2017ರ ಮಾರ್ಚ್‌ 27ರಿಂದ ಮೂರು ದಿನ ಸ್ಪರ್ಧೆ ನಡೆಸಲು ತೀರ್ಮಾನಿಸಲಾಗಿದೆ. [ಕರಾವಳಿಯ ಬೀಜ್ ಗಳ ಅಭಿವೃದ್ಧಿಗೆ 92 ಕೋಟಿ ಯೋಜನೆ]

abhayachandra jain

ಕ್ರೀಡಾ ಇಲಾಖೆಯಿಂದ ಅನುದಾನ : 'ಸಸಿಹಿತ್ಲು ಬೀಚ್‌ನಲ್ಲಿ ಸಾಹಸ ಕ್ರೀಡಾಚಟುವಟಿಕೆ ಅಭಿವೃದ್ಧಿಗೆ ಪ್ರವಾಸೋದ್ಯಮ ಮತ್ತು ಕ್ರೀಡಾ ಇಲಾಖೆಯಿಂದ 1 ಕೋಟಿ ರೂ. ಅನುದಾನ ನೀಡಲಾಗುತ್ತದೆ' ಎಂದು ಯುವಜನಸೇವೆ, ಕ್ರೀಡೆ ಹಾಗೂ ಮೀನುಗಾರಿಕಾ ಸಚಿವ ಅಭಯ ಚಂದ್ರ ಜೈನ್ ಭರವಸೆ ನೀಡಿದ್ದಾರೆ. [ವಾರಾಂತ್ಯಕ್ಕೆ ಕರ್ನಾಟಕ ಹಬ್ಬವೇ ಅತ್ಯುತ್ತಮ ಆಯ್ಕೆ..ಯಾಕಂದ್ರೆ?]

'ಬೀಚ್‌ನಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ, ಸಸಿಹಿತ್ಲು ಪ್ರದೇಶದ ಮುಖ್ಯ ರಸ್ತೆ ಬದಿಯಲ್ಲಿ ಹೈ ಮಾಸ್ಟ್ ದೀಪಗಳ ಅಳವಡಿಕೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ' ಎಂದು ಅಭಯಚಂದ್ರ ಜೈನ್ ಹೇಳಿದ್ದಾರೆ.

ಸ್ಪರ್ಧೆಯ ದಿನಾಂಕ ಘೋಷಣೆ : '2017ರ ಮಾರ್ಚ್ 27, 28 ಮತ್ತು 29ರಂದು ಸಹಿಹಿತ್ಲು ಬೀಚ್‌ನಲ್ಲಿ ರಾಷ್ಟ್ರೀಯ ಸರ್ಫಿಂಗ್ ಉತ್ಸವ ನಡೆಸಲಾಗುತ್ತದೆ. ಸಸಿಹಿತ್ಲು ಪ್ರಾಕೃತಿಕ ಸೌಂದರ್ಯವನ್ನು ಹೊಂದಿರುವ ಬೀಚ್. ಅದನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸಲು ಸ್ಥಳೀಯರ ಸಹಕಾರ ಅಗತ್ಯ' ಎಂದು ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ತಿಳಿಸಿದ್ದಾರೆ.

English summary
Minister for Youth Affairs and Sports Abhayachandra Jain said, surfing competitions will be organized every year in Sasihithlu beach in Dakshina Kannada and govt Will release fund to development of basic infrastructure at beach.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X