ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಮುಖಂಡ ಈಶ್ವರ್ ಕಟೀಲ್ ಕೊಲೆಗೆ ಸಂಚು ? ಮೂವರ ಬಂಧನ

|
Google Oneindia Kannada News

ಮಂಗಳೂರು, ಮಾರ್ಚ್‌ 30: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ-ಮೂಡಬಿದಿರೆ ಕ್ಷೆತ್ರದ ಬಿಜೆಪಿ ಮುಖಂಡರೊಬ್ಬರ ಕೊಲೆಗೆ ದುಷ್ಕರ್ಮಿಗಳ ತಂಡ ಒಂದು ಯತ್ನಿಸಿ ವಿಫಲಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ಮಂಗಳೂರು ಪೊಲೀಸರು ನಿನ್ನೆ ದರೊಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರನ್ನು ಪ್ರದೀಪ್ ಪೂಜಾರಿ, ದಿನೇಶ್ ಬೆಳ್ಚಡ ಮತ್ತು ಶಿವಪ್ರಸಾದ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಮಾರಕಾಸ್ತ್ರಗಳು ಸೇರಿದಂತೆ ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಅರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೊಳಿಸಿದಾಗ ಕೊಲೆ ಸಂಚಿನ ಆಘಾತಕಾರಿ ಮಾಹಿತಿ ಹೊರಬಿದ್ದಿದೆ ಎಂದು ಹೇಳಲಾಗಿದೆ.

ಸುಳ್ಳು ಸುದ್ದಿ ಆರೋಪ: 'ಪೋಸ್ಟ್ ಕಾರ್ಡ್' ಮಹೇಶ್ ವಿಕ್ರಂ ಹೆಗ್ಡೆ ಬಂಧನ ಸುಳ್ಳು ಸುದ್ದಿ ಆರೋಪ: 'ಪೋಸ್ಟ್ ಕಾರ್ಡ್' ಮಹೇಶ್ ವಿಕ್ರಂ ಹೆಗ್ಡೆ ಬಂಧನ

ಬಂಧಿತ ಆರೋಪಿಗಳು ಮುಲ್ಕಿ - ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಬಿಜೆಪಿ ಮುಖಂಡ ಈಶ್ವರ್ ಕಟೀಲ್ ಅವರ ಕೊಲೆಗೆ ಸಂಚು ನಡೆಸಿದ್ದರು ಎಂದು ಹೇಳಲಾಗಿದೆ. ಬಂಧಿತರು ಈಶ್ವರ್ ಕಟೀಲ್ ಅವರ ಕೊಲೆಗೆ ಯತ್ನಿಸಿದ್ದರು. ಆದರೆ ಅದೃಷ್ಠವಶಾತ್ ಈಶ್ವರ್ ಕಟೀಲ್ ಆರೋಪಿಗಳ ಕೈ ಸಿಗದೆ ಪಾರಾಗಿದ್ದರು.

Three accused arrested in plotting murder of BJP leader

ಈ ಕೊಲೆ ಸಂಚಿನ ಮಾಹಿತಿ ಪಡೆದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಈ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಈ ನಡುವೆ ರಾಜಕೀಯ ಒತ್ತಡದಿಂದಾಗಿ ಪೊಲೀಸರು ಈ ಪ್ರಕರಣವನ್ನು ತಿರುಚಿ ದರೋಡೆಗೆ ಸಂಚು ಪ್ರಕರಣ ಎಂದು ಬದಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಂಧಿತರು ಮುಲ್ಕಿ ಮೂಡಬಿದಿರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕಾಂಗ್ರೆಸ್‌ ಯುವ ಮುಖಂಡ ಮಿಥುನ್ ರೈ ಅವರ ಬೆಂಬಲಿಗರೆಂದು ಹೇಳಲಾಗಿದೆ.

ಈ ಹಿನ್ನಲೆಯಲ್ಲಿ ಪೊಲೀಸರ ಮೇಲೆ ರಾಜಕೀಯ ಒತ್ತಡ ಹೇರಿ ಪ್ರಕರಣವನ್ನು ಬದಲಿಸಿ ದರೋಡೆ ಸಂಚು ಎಂದು ಫಿಕ್ಸ್ ಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಈ ನಡುವೆ ಪೊಲೀಸರು ಪ್ರಕರಣದ ಪ್ರಮುಖ ಸೂತ್ರಧಾರಿ ಎಂದು ಹೇಳಲಾಗುವ ಕಾಂಗ್ರೆಸ್ ಮುಖಂಡ ನವೀನ್ ಕುಮಾರ್ ಕಟೀಲ್ ಮತ್ತು ಆಕಾಶ್ ಗಣಿಗ ಅವರ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ. ಪೊಲೀಸರು ನವೀನ್ ಹಾಗು ಆಕಾಶ್ ಬಂಧನಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

English summary
Mangaluru police arrested three accused in connection with plotting murder of BJP leader Ishwar Kateel. The arrested have been identified as Pradeep Poojari, Dinesh Belchada and Shivaprasad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X