ಇಂಡಿಯನ್ ಮುಜಾಹಿದ್ದೀನ್ ಉಗ್ರರು ಮಂಗಳೂರಿನಿಂದ ಧಾರವಾಡ ಜೈಲಿಗೆ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಏಪ್ರಿಲ್ 14 : ದೇಶದಲ್ಲಿ ನಡೆಯುತ್ತಿದ್ದ ಉಗ್ರ ಚಟುವಟಿಕೆಗೆ ಮಂಗಳೂರಿನಲ್ಲಿ ಬಾಂಬ್ ತಯಾರಿಸಿ ಪೂರೈಕೆ ಮಾಡುತ್ತಿದ್ದರು ಎಂಬ ಆರೋಪದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಮೂವರು ಉಗ್ರರನ್ನು ಧಾರವಾಡದ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.

2008ರಲ್ಲಿ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬುಧವಾರ ಸೈಯದ್ ನೌಶದ್, ಮಹಮ್ಮದ್ ಬಾವಾ ಅಬೂಬಕ್ಕರ್, ಫಕೀರ್ ಅಹ್ಮದ್ ಎನ್ನುವ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.[2008ರ ಉಗ್ರ ಚಟುವಟಿಕೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ]

Three terror activities accused shifted to Dharwad Jail from Mangaluru central jail

ಈ ಹಿನ್ನೆಲೆಯಲ್ಲಿ ಅಪರಾಧಿಗಳನ್ನು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕರೆತರಲಾಗಿತ್ತು. ಕಾರಣಾಂರಗಳಿಂದ ಗುರುವಾರ ರಾತ್ರಿ ಬಂಧಿತ ಉಗ್ರ ಚಟುವಟಿಕೆ ಆರೋಪಿಗಳನ್ನು ಪೊಲೀಸ್ ಬಿಗಿ ಭದ್ರತೆಯಲ್ಲಿ ಧಾರವಾಡ ಸೆಂಟ್ರಲ್ ಜೈಲಿಗೆ ರವಾನಿಸಲಾಗಿದೆ ಎಂದು ಜೈಲು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Ahmed Bava, Fakir Ahmed and Syed Mohammed Naushad, who were earlier held guilty by the judge of the third additional district and sessions court here are now shifted to Dharwad jail from Mangaluru central jail on April 13 night.
Please Wait while comments are loading...