ಮಿಥುನ್ ರೈಗೆ ಟಿಕೆಟ್ ನಿರಾಕರಣೆ, ಯುವ ಕಾಂಗ್ರೆಸ್ ಮುಖಂಡರಿಂದ ಬಂಡಾಯ

Posted By:
Subscribe to Oneindia Kannada

ಮಂಗಳೂರು ಏಪ್ರಿಲ್ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಭದ್ರ ಕೋಟೆಯಂತಿದ್ದ ಮುಲ್ಕಿ-ಮೂಡಬಿದ್ರೆ ಕ್ಷೇತ್ರದಲ್ಲಿ ಬಂಡಾಯ ಸ್ಪೋಟಗೊಂಡಿದೆ. ಮುಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲಿ ಶಾಸಕ ಅಭಯಚಂದ್ರ ಜೈನ್ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಯುವ ಕಾಂಗ್ರೆಸ್ ಮುಖಂಡರು ತಿರುಗಿ ಬಿದ್ದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕೈ ಪಾಳಯದಲ್ಲಿ ಭಿನ್ನಮತ ಆರಂಭವಾಗಿದೆ‌. ಮೂಡಬಿದ್ರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ಟಿಕೆಟ್ ಕೈ ತಪ್ಪಿದೆ. ಈ ಹಿನ್ನೆಲೆಯಲ್ಲಿ ಯೂತ್ ಕಾಂಗ್ರೆಸ್ ಘಟಕ ಸಿಡಿದೆದ್ದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಯೂತ್ ಕಾಂಗ್ರೆಸ್ ಅಧ್ಯಕ್ಷ ಮತ್ತು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಮುಲ್ಕಿ-ಮೂಡಬಿದ್ರೆ ಕ್ಷೇತ್ರದಲ್ಲಿ ಯುವಕರಿಗೆ ಅವಕಾಶ ನೀಡಿದ್ದಲಿ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಶಾಸಕ ಅಭಯಚಂದ್ರ ಜೈನ್ ಬಹಿರಂಗವಾಗಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಮಿಥುನ್ ರೈಗೆ ಟಿಕೆಟ್ ನೀಡೋದಾಗಿ ವರ್ಷದ ಹಿಂದೆ ಅಭಯಚಂದ್ರ ಜೈನ್ ಅಭಯ ನೀಡಿದ್ದರು. ಈಗ ಮಾತು ತಪ್ಪಿದ್ದಾರೆ ಎಂದು ಯುವ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ticket denied to Mithun Rai, youth congress leaders mass resignation in Mangaluru

ಮಾತು ತಪ್ಪಿದ ಅಭಯಚಂದ್ರ ಜೈನ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಯೂತ್ ಕಾಂಗ್ರೆಸ್ ನ ‌50 ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಮುಖಂಡರು ಹಾಗೂ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

12 ಹಾಲಿ ಶಾಸಕರಿಗೆ ಟಿಕೆಟ್ ನೀಡದೆ ರಣತಂತ್ರ ಹೂಡಿದ ಕಾಂಗ್ರೆಸ್

ಇದು ಕಾಂಗ್ರೆಸ್ ಕತೆಯಾದರೆ ಬಿಜೆಪಿ ಪರಿಸ್ಥತಿ ಕೂಡ ಭಿನ್ನವಾಗಿಲ್ಲ. ಮುಲ್ಕಿ-ಮೂಡಬಿದಿರೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಉಮಾನಾಥ್ ಕೋಟ್ಯಾನ್ ಅವರನ್ನು ಕಣಕ್ಕಿಳಿಸಿರುವ ಹಿನ್ನೆಲೆಯಲ್ಲಿ ಜಗದೀಶ್ ಅಧಿಕಾರಿ ಬಂಡಾಯದ ಬಾವುಟ ಹಾರಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
MLA Abhayachandra Jain name has been announced as candidate for Mulky Moodbidre constituency. After ticket denied to Mithun Rai in the constituency, youth congress leaders and members decided to tender mass resignation.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ