ಬೆಳ್ತಂಗಡಿ, ಪುತ್ತೂರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಡಿಸೆಂಬರ್. 16: ಗಾಂಜಾ ಸಾಗಾಟ ಮಾಡುತ್ತಿದ್ದ ಮುಹಮ್ಮದ್ ಅಶ್ರಫ್ ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ಬೆಳ್ತಂಗಡಿಯ ಹಳೆಕೋಟೆ ವಾಣಿ ಕಾಲೇಜಿನ ಎದುರು ಇರುವ ಬಸ್ ನಿಲ್ದಾಣದಲ್ಲಿ ಗಾಂಜಾ ಸಾಗಾಟ ಮಾರಾಟ ಮಾಡುತ್ತಿದ್ದ ಹಯಾಝ್ ಅಲಿಯಾಸ್ ಫೈಯಾಝ್ನ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಮುಹಮ್ಮದ್ ಅಶ್ರಫ್ ಚಿಕ್ಕಮುಡ್ನೂರು ಗ್ರಾಮದ ಸಾಲ್ಮರದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಮುಹಮ್ಮದ್ ಅಶ್ರಫ್ ನನ್ನು ಬಂಧಿಸಲಾಗಿದೆ. ಬಂಧಿತನಿಂದ 500 ಗ್ರಾಂ ಗಾಂಜಾವನ್ನ ವಶಪಡಿಸಿಕೊಳ್ಳಲಾಗಿದೆ.

ಇತ್ತ ಬೆಳ್ತಂಗಡಿಯ ಹಳೆಕೋಟೆ ವಾಣಿ ಕಾಲೇಜಿನ ಎದುರು ಇರುವ ಬಸ್ ನಿಲ್ದಾಣದಲ್ಲಿ ಗಾಂಜಾ ಸಾಗಾಟ ಮಾರಾಟ ಮಾಡುತ್ತಿದ್ದಹಯಾಝ್ ಅಲಿಯಾಸ್ ಫೈಯಾಝ್ನ ಪೊಲೀಸರು ದಸ್ತಗಿರಿ ಮಾಡಿ 105 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

Two marijuana smuggling case two accuse arrested at Belthangady and Puttu

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಅಧೀಕ್ಷಕರು, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರ ನಿರ್ದೇಶನದಂತೆ ಬಂಟ್ವಾಳ ಉಪ ವಿಭಾಗದ ಪೊಲೀಸ್‌ ಉಪಾಧೀಕ್ಷಕರು ಮತ್ತು ಪೊಲೀಸ್‌ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಪೊಲೀಸ್‌ ಠಾಣಾ ಪಿಎಸ್ ಐ ರವಿ ಬಿಎಸ್ ರವರ ನೇತೃತ್ವದಲ್ಲಿ ಠಾಣಾ ಸಿಬ್ಬಂದಿ ಎಎಸ್ ಐ ಕರುಣಾಕರ, ಎಎಸ್ಐ ಕಲೈಮಾರ್, ಲಾರೆನ್ಸ್‌, ಶಿವರಾಮ ರೈ, ರಾಜೇಶ್‌, ಚಾಲಕ ಹರೀಶ್‌ ಹಾಗೂ ನಕ್ಸಲ್ ನಿಗ್ರಹ ದಳದ ಹರೀಶ್‌, ಸತೀಶ್ ಆರೋಪಿಯನ್ನ ಪತ್ತೆಹಚ್ಚಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Two Separate story of crime in mangaluru district. One Puttur police found 500 gram in Marijuana sale accuse arrested. Another one Belthangady police found 105 gram in Marijuana sale accuse arrested.
Please Wait while comments are loading...