ಉಪ್ಪಿನಂಗಡಿ: ಯುವತಿಯೊಂದಿಗೆ ಮಾತನಾಡಿದಕ್ಕೆ ಯುವಕನ ಮೇಲೆ ಹಲ್ಲೆ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಜನವರಿ. 05 : ಕಾಲೇಜು ವಿದ್ಯಾರ್ಥಿಯೊಬ್ಬ ಅದೇ ಕಾಲೇಜಿನ ಹುಡುಗಿಯೊಂದಿಗೆ ಸಲುಗೆಯಿಂದ ಮಾತನಾಡುತ್ತಿರುವುದನ್ನು ಕಂಡ ಇತರೆ ವಿದ್ಯಾರ್ಥಿಗಳ ಗುಂಪೊಂದು ಯುವಕನ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬುಧವಾರ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.

ಈ ವೇಳೆ ಎರಡೂ ಕಡೆಯ ವಿದ್ಯಾರ್ಥಿಗಳು ಜಮಾಯಿಸಿ ಪರಸ್ಪರ ಮಾತಿನ ಚಕಮಕಿ ನಡೆಸಿದರಲ್ಲದೆ, ಹೊಕೈ ನಡೆಸಿದರೆನ್ನಲಾಗಿದೆ.

ಈ ನಡುವೆ ಮಧ್ಯ ಪ್ರವೇಶಿಸಿದ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಯತ್ನಿಸಿದರಾದರೂ, ಪರಿಸ್ಥಿತಿ ನಿಯಂತ್ರಣ ಬಾರದ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Two students gangs open fight in Uppinangadi Government College

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಉಪನ್ಯಾಸಕರ ಬಳಿ ಘಟನೆಯ ಮಾಹಿತಿ ಪಡೆದುಕೊಂಡರು. ಬೆಳಗ್ಗೆ ಕಾಲೇಜಿಗೆ ಬಂದಿದ್ದ ಕಾಲೇಜಿನ ಪ್ರಾಂಶುಪಾಲೆ ವಿದ್ಯಾರ್ಥಿಗಳ ಸಂಘರ್ಷದ ವೇಳೆ ಕಾಲೇಜಿನಲ್ಲಿ ಕಾಣಿಸದೆ ನಾಪತ್ತೆಯಾಗಿದ್ದರು.

ಈ ಬಗ್ಗೆ ಕಾಲೇಜಿನ ಉಪನ್ಯಾಸಕರನ್ನು ವಿಚಾರಿಸಿದರೆ, ಬೆಳಗ್ಗೆ ಬಂದಿದ್ದ ಪ್ರಾಂಶುಪಾಲರು ಕಾಲೇಜಿನ ಕಾರ್ಯಕ್ರಮವೊಂದಕ್ಕೆ ಶಾಸಕರನ್ನು ಆಮಂತ್ರಿಸಲು ಹೋಗಿರಬೇಕೆಂದು ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
A boy was seen talking to a girl from another community on Wednesday at Uppinangadi Government College. Some students objected to this and took the boy to task. They even went to assault him. students from the community of the boy came to his rescue. Arguments and fights took place between the gangs.
Please Wait while comments are loading...