ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತಾಂತರ ಯತ್ನ ಆರೋಪ, ಯುವತಿಯರು ಪೊಲೀಸರ ವಶಕ್ಕೆ

By ಕಿರಣ್ ಸಿರ್ಸೀಕರ್
|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 6 : ಮತಾಂತರಕ್ಕೆ ಯತ್ನಿಸುತ್ತಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಇಬ್ಬರು ಯುವತಿಯರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರ ವಶಕ್ಕೆ ನೀಡಿದ ವಿಚಾರ ಬೆಳಕಿಗೆ ಬಂದಿದೆ.

ಹಿಂದೂ ಧರ್ಮಕ್ಕೆ ಮತಾಂತರ, ಅರುಣ್ ಮೊಂತೆರೊ ಈಗ ಅರುಣ್ ಪೂಜಾರಿಹಿಂದೂ ಧರ್ಮಕ್ಕೆ ಮತಾಂತರ, ಅರುಣ್ ಮೊಂತೆರೊ ಈಗ ಅರುಣ್ ಪೂಜಾರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಪಡ್ನೂರು ಗ್ರಾಮದ ಉಗ್ಗಬೆಟ್ಟು ಎಂಬಲ್ಲಿ ಇರುವ ಮನೆಗಳಿಗೆ ಕ್ರೈಸ್ತ ಧರ್ಮಕ್ಕೆ ಸಂಬಂಧಪಟ್ಟ ಪುಸ್ತಕವನ್ನು ನೀಡುತ್ತಿದ್ದರು ಎಂದು ಆರೋಪಿಸಲಾಗಿತ್ತು.

Two woman held for forceful conversion

ಮನೆ ಮಂದಿಯನ್ನು ಮತಾಂತರಕ್ಕೆ ಯತ್ನಿಸುತ್ತಿದ್ದಾರೆ ಎನ್ನುವ ಆರೋಪದಡಿ ಸ್ಥಳೀಯ ಗ್ರಾಮಸ್ಥರು ಇಬ್ಬರು ಯುವತಿಯರನ್ನು ಸುತ್ತುವರಿದು, ವಿಚಾರಿಸಿದ್ದರು. ಅಲ್ಲದೆ, ಹೆಚ್ಚಿನ ತನಿಖೆಗಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಸ್ವಧರ್ಮಿಯರಿಂದ ಕಿರುಕುಳ, ಬೇಸತ್ತು ಹಿಂದೂ ಧರ್ಮಕ್ಕೆ ಮತಾಂತರಸ್ವಧರ್ಮಿಯರಿಂದ ಕಿರುಕುಳ, ಬೇಸತ್ತು ಹಿಂದೂ ಧರ್ಮಕ್ಕೆ ಮತಾಂತರ

ಬಡ ಹಾಗೂ ಕೃಷಿ ಚಟುವಟಿಕೆಗಳಲ್ಲೇ ತೊಡಗಿಕೊಂಡಿರುವ ಕುಟುಂಬಗಳು ಹೆಚ್ಚಾಗಿ ಇಲ್ಲಿದ್ದು, ಮಹಿಳೆಯರು ಇರುವ ಸಂದರ್ಭ ನೋಡಿ ಈ ಯುವತಿಯರು ಮನೆಗೆ ಪ್ರವೇಶಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕ್ರೈಸ್ತ ಧರ್ಮಕ್ಕೆ ಸೇರಿದ ಪುಸ್ತಕಗಳನ್ನು ಮನೆ ಮಂದಿಗೆ ನೀಡಿ, ಆ ಧರ್ಮದ ಬಗ್ಗೆ ಪ್ರಚಾರ ನಡೆಸುತ್ತಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

English summary
Two woman held for forceful conversion by offering books at Hindu houses at Ugebetu, Bantwal. It is said they have been handed over to Bantwal police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X