ಭೂಗತ ಪಾತಕಿ ರಶೀದ್ ಮಲಬಾರಿ ಸಹಚರ ಬಂಧನ

Posted By:
Subscribe to Oneindia Kannada

ಮಂಗಳೂರು, ಅಕ್ಟೋಬರ್ 13: ಭೂಗತ ಪಾತಕಿ ರಶೀದ್ ಮಲಬಾರಿ ಸಹಚರನನ್ನು ಪಣಂಬೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರಿನ ಸುರತ್ಕಲ್ ಸಮೀಪದ ಜೋಕಟ್ಟೆ ನಿವಾಸಿ ಮಹಮ್ಮದ್ ಶಮೀರ್ ಅಲಿಯಾಸ್ ಡೆಡ್ಲಿ ಎಂಬಾತನನ್ನು ಪುತ್ತೂರಿನಲ್ಲಿ ಬಂಧಿಸಲಾಗಿದೆ.

2013 ರಲ್ಲಿ ಪಣಂಬೂರು ಠಾಣೆಯಲ್ಲಿ ಮಹಮ್ಮದ್ ಸಮೀರ್ ವಿರುದ್ಧ ಹಫ್ತಾ ವಸೂಲಿ, ಹಲ್ಲೆ, ದರೋಡೆ ಸೇರಿದಂತೆ ಬೆದರಿಕೆ ಪ್ರಕರಣ ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಆರೋಪಿ ಮಹಮ್ಮದ್ ಶಮೀರ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ನ್ಯಾಯಾಲಯ ದಿಂದ ಜಾಮೀನು ಪಡೆದಿದ್ದ ಶಮೀರ್ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ .

 Underworld don Rashid Malabari associate arrested in Mangaluru

ಈ ನಡುವೆ ಪಣಂಬೂರು ಪೊಲೀಸರು ಮಹಮ್ಮದ್ ಶಮೀರ್ ಗೆ ಶೋಧ ಕಾರ್ಯ ಆರಂಭಿಸಿದ್ದರು. ಆರೋಪಿ ಮಹಮ್ಮದ್ ಶಮೀರ್ ಪುತ್ತೂರಿನ ಕಬಕ ಗ್ರಾಮದ ಕಲ್ಲಂತಡ್ಕದಲ್ಲಿ ತಲೆಮರೆಸಿಕೊಂಡಿರುವ ಮಾಹಿತಿ ಪಡೆದ ಪಣಂಬೂರು ಪೊಲೀಸರು ಮಹಮ್ಮದ್ ಸಮೀರ್ ನನ್ನು ಬಂಧಿಸಿದ್ದಾರೆ .

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Underworld don Rashid Malabari associate arrested in Mangaluru by Panambur police here on October 13.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ