• search

ಟೆಂಪಲ್ ರನ್ ಆರಂಭಿಸಿದ ಸಚಿವ ಯು.ಟಿ. ಖಾದರ್

Subscribe to Oneindia Kannada
For mangaluru Updates
Allow Notification
For Daily Alerts
Keep youself updated with latest
mangaluru News
    ಟೆಂಪಲ್ ರನ್ ಆರಂಭಿಸಿದ ಸಚಿವ ಯು.ಟಿ. ಖಾದರ್ | Oneindia Kannada

    ಮಂಗಳೂರು, ಜೂನ್ 11: ರಾಜ್ಯದ ಮೈತ್ರಿ ಸರಕಾರದಲ್ಲಿ ಸಚಿವರಾಗಿ‌ ಆಯ್ಕೆಯಾದ ಸಚಿವ ಯು.ಟಿ. ಖಾದರ್ ದಕ್ಷಿಣ ಕನ್ನಡ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ಆರಂಭಿಸಿದ್ದಾರೆ. ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಅವರು ಭೇಟಿ ನೀಡಿದರು. ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಖಾದರ್, ದೇವಸ್ಥಾನದ ಹೊರಗಿರುವ ಹುಂಡಿಗೆ ಕಾಣಿಗೆ ಹಾಕಿದರು.

    ನಂತರ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗಡೆ ಅವರನ್ನು ಭೇಟಿ ಮಾಡಿದರು. ಇದೇ ಸಂದರ್ಭದಲ್ಲಿ ವೀರೇಂದ್ರ ಹೆಗಡೆ ಸಚಿವ ಖಾದರ್ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೇನ್ ಸೇರಿದಂತೆ ಮತ್ತಿತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

    ಕುಮಾರಸ್ವಾಮಿ ಸಚಿವ ಸಂಪುಟದಲ್ಲಿ ಯಾರಿಗೆ ಯಾವ ಖಾತೆ?

    ನಂತರ ಇಲ್ಲೆ ಸಮೀಪದಲ್ಲಿರುವ ಕನ್ಯಾಡಿಯ ಶ್ರೀರಾಮಮಂದಿರಕ್ಕೆ ಭೇಟಿ ನೀಡಿದ ಯು.ಟಿ. ಖಾದರ್‌ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮಂಗಳೂರಿನ ಶ್ರೀ ಕ್ಷೇತ್ರ ಕುದ್ರೋಳಿ ಗೋಕರ್ಣನಾಥ ದೇವಾಲಯಕ್ಕೂ ಭೇಟಿ ನೀಡಿದ ಯು.ಟಿ ಖಾದರ್ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.

    UT Khader started temple run in Dakshina Kannada

    ಸಚಿವರಾದ ಬಳಿಕ ಯು.ಟಿ ಖಾದರ್ ಅವರ ಈ ಟೆಂಪಲ್ ರನ್ ಗಮನ ಸೆಳೆದಿದ್ದು ಚರ್ಚೆಗೆ ಗ್ರಾಸವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ 7 ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಗೆದ್ದಿದೆ. ಕಾಂಗ್ರೆಸ್ ಜಿಲ್ಲೆಯಲ್ಲಿ ನೆಲ ಕಚ್ಚಲು ಕಾರಣ ಹುಡುಕಲಾಗುತ್ತಿದೆ.

    UT Khader started temple run in Dakshina Kannada

    ಜಿಲ್ಲೆಯ ಬಿಜೆಪಿ ಶಾಸಕರು ನನ್ನ ವೈರಿಗಳಲ್ಲ ಮಿತ್ರರು: ಯುಟಿ ಖಾದರ್

    ಈ ನಡುವೆ ಮೈತ್ರಿ ಸರಕಾರ ಪತನಗೊಂಡು ಚುನಾವಣೆ ಎದುರಾದರೆ ಎಂಬ ಭಯ ಖಾದರ್ ಅವರನ್ನು ಕಾಡುತ್ತಿದೆಯೇ? ಅಥವಾ ಮುಂಬರುವ ಚುನಾವಣೆಯ ದೃಷ್ಟಿಯಿಂದ ಖಾದರ್ ನಡೆ ಇಟ್ಟಿದ್ದಾರೆಯೇ ? ಎಂಬುದರ ಕುರಿತು ಚರ್ಚೆ ಆರಂಭವಾಗಿದೆ.

    ಇನ್ನಷ್ಟು ಮಂಗಳೂರು ಸುದ್ದಿಗಳುView All

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    English summary
    Newly appointed minister for Urban Development and Housing UT Khader visited temples of Dakshina Kannada district.

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more