ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಜೆಟ್ ನಲ್ಲಿ ಕರಾವಳಿಯನ್ನು ನಿರ್ಲಕ್ಷಿಸಿಲ್ಲ: ಯು.ಟಿ. ಖಾದರ್

|
Google Oneindia Kannada News

ಮಂಗಳೂರು, ಜುಲೈ 06: ನೂತನ ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ಟನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿನ್ನೆ ಗುರುವಾರ ಮಂಡಿಸಿದರು. ಅದರೆ ಈ ಬಜೆಟ್ ನಲ್ಲಿ ಕರಾವಳಿ ಭಾಗಕ್ಕೆ ಯಾವುದೇ ಹೊಸ ಯೋಜನೆಗಳನ್ನು ಘೋಷಿಸದೇ ಸಂಪೂರ್ಣ ನಿರ್ಲಕ್ಷಿಸಲಾಗಿದೆ ಎನ್ನುವ ಆಕ್ರೋಶ ಕರಾವಳಿ ಭಾಗದಲ್ಲಿ ವ್ಯಕ್ತವಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಶಾಸಕರು ಒಂದೆಡೆ ಉಗ್ರ ಹೋರಾಟಕ್ಕೆ ಸಜ್ಜಾಗುತ್ತಿದ್ದರೆ, ಇನ್ನೊಂದೆಡೆ ಕರಾವಳಿ ನಿರ್ಲಕ್ಷಿತ ಬಜೆಟ್ ಸಮರ್ಥಿಸಿಕೊಂಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳಿಗೆ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ ಖಾದರ್, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಳೆದ ಫೆಬ್ರವರಿಯಲ್ಲಿ ಮಂಡಿಸಿರುವ ಬಜೆಟ್ ನಲ್ಲಿ ನೀಡಿರುವ ಎಲ್ಲಾ ಯೋಜನೆಗಳು ಮುಂದುವರಿಯಲಿವೆ.

ಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಆಯವ್ಯಯದ Highlightsಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಆಯವ್ಯಯದ Highlights

ಇಂದು ಹೆಚ್ಚುವರಿಯಾಗಿ ಬಜೆಟ್ ನಲ್ಲಿ ಯೋಜನೆಗಳನ್ನು ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

U T Khader supported coastal neglected Budget

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯದ ಆರ್ಥಿಕ ಶಿಸ್ತು ಕಾಪಾಡಿಕೊಂಡು, ರೈತರ ಸಾಲಮನ್ನಾದಂತಹ ದಿಟ್ಟ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ. ರೈತರ 2 ಲಕ್ಷ ರೂಪಾಯಿ ವರೆಗಿನ ಸಾಲಮನ್ನಾ ಐತಿಹಾಸಿಕವಾಗಿದೆ.

ಗರ್ಭಿಣಿ ಮಹಿಳೆಯರಿಗೆ ಮಾಸಿಕ ಧನ ರೂ 1000/- ನೆರವು ನೀಡುವ ಮುಖ್ಯಮಂತ್ರಿ ಮಾತೃಶ್ರೀ ಯೋಜನೆ, ಹಿರಿಯರಿಗೆ ಸಂಧ್ಯಾ ಸುರಕ್ಷಾ ಮಾಸಾಶನವನ್ನು 600 ರಿಂದ 1000 ರೂಪಾಯಿಗೆ ಏರಿಕೆ, ವಿಕಲಚೇತನರಿಗೆ ಅರ್ಜಿ ಸಲ್ಲಿಸಿದ ತಕ್ಷಣವೇ ಮನೆ ನಿರ್ಮಾಣ, ಬಡವರಿಗೆ ಕಿಡ್ನಿ, ಲಿವರ್, ಹೃದಯ ಮತ್ತಿತರ ಅಂಗಾಂಗ ಕಸಿ ಚಿಕಿತ್ಸೆಗಳಿಗೆ 30 ಕೋಟಿ ರೂಪಾಯಿ ಅನುದಾನ ಮತ್ತಿತರ ಸಾಮಾಜಿಕ ಕಾರ್ಯಕ್ರಮಗಳು ದುರ್ಬಲವರ್ಗದ ಹೇಳಿಗೆಗೆ ಪೂರಕವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕುಮಾರಸ್ವಾಮಿ ಬಜೆಟ್ 2018: ಯಾವುದು ಏರಿಕೆ? ಯಾವ್ದು ಇಳಿಕೆ?ಕುಮಾರಸ್ವಾಮಿ ಬಜೆಟ್ 2018: ಯಾವುದು ಏರಿಕೆ? ಯಾವ್ದು ಇಳಿಕೆ?

ಮೊಬೈಲ್ ಬಿಡಿ ಭಾಗ ತಯಾರಿಕಾ ಘಟಕಗಳ ಸ್ಥಾಪನೆ ನಿರುದ್ಯೋಗಿಗಳಿಗೆ ಆಶಾಕಿರಣವಾಗಿದೆ. ಸರ್ಕಾರಿ ಶಾಲಾ ಕಟ್ಟಡಗಳ ದುರಸ್ಥಿಗೆ ರೂ. 150 ಕೋಟಿ ಅನುದಾನ, ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬಹುಮಹಡಿ ವಾಹನ ಸಂಕೀರ್ಣ ಮತ್ತಿತರ ಜನೋಪಯೋಗಿ ಯೋಜನೆಗಳು ನಾಡಿನ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಖಾದರ್ ತಿಳಿಸಿದ್ದಾರೆ.

ಈ ಹಿಂದಿನ ಸರ್ಕಾರ ಅಂದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಲಭೂತ ಸೌಲಭ್ಯಗಳಿಗೆ ಒತ್ತು ನೀಡಲಾಗಿತ್ತು. ಕರಾವಳಿಯ ಪ್ರವಾಸಿ ಸ್ಥಳಗಳಲ್ಲಿ ಬೋಟ್ ಹೌಸ್, ತೇಲುವ ಉಪಹಾರ ಗೃಹ, ಸುಮಾರು 85 ಕೋಟಿ ರೂ. ವೆಚ್ಚದಲ್ಲಿ ಅತ್ಯುನ್ನತ ಭದ್ರತಾ ವ್ಯವಸ್ಥೆಯ ಕಾರಾಗೃಹ.

ಎಚ್‌ಡಿಕೆ ಬಜೆಟ್ ಬಗ್ಗೆ ನಾಯಕರು ಹೀಗಂದರು, ಓದುಗರು ನೀವೇನಂತೀರಿ?ಎಚ್‌ಡಿಕೆ ಬಜೆಟ್ ಬಗ್ಗೆ ನಾಯಕರು ಹೀಗಂದರು, ಓದುಗರು ನೀವೇನಂತೀರಿ?

ಪಶ್ಚಿಮ ವಾಹಿನಿ ಯೋಜನೆಯಲ್ಲಿ ನೇತ್ರಾವತಿ ನದಿಯಲ್ಲಿ ಕುಡಿಯುವ ನೀರು ಹಾಗೂ ನೀರಾವರಿ ಸೌಲಭ್ಯ ಕಲ್ಪಿಸಲು ಮಂಗಳೂರು ತಾಲೂಕಿನ ಹರೇಕಳ ಮತ್ತು ಅಡ್ಯಾರು ಮಧ್ಯೆ ಸುಮಾರು ರೂ. 174 ಕೋಟಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಘೋಷಿಸಲಾಗಿತ್ತು. ಈ ಯೋಜನೆಗಳು ಯಥಾರೂಪದಲ್ಲಿಯೇ ಮುಂದುವರಿಯಲಿದೆ ಎಂದು ಸಚಿವರು ಈ ಬಜೆಟ್ ಸಮರ್ಥಿಸಿಕೊಂಡರು.

English summary
Chief Minister H D Kumaraswamy who is holds the Finance portfolio today presented his first Budget. Through out his budget presentation coastal districts are neglected. opposition party BJP members protest in assembly against Kumaraswamy's budget.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X